
CHITRADURGA NEWS | 30 JUNE 2026
ಚಿತ್ರದುರ್ಗ: 2026-27ನೇ ಸಾಲಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಜಿಲ್ಲೆಯ ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಾದ ಅಡಿಕೆ, ದಾಳಿಂಬೆ ಮತ್ತು ಮಾವು ಬೆಳೆಗಳಿಗೆ ಜಿಲ್ಲೆಯ ಎಲ್ಲಾ ತಾಳ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗಿದ್ದು, ವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನವಾಗಿದೆ.
ಇದನ್ನೂ ಓದಿ: ವೀರಶೈವ ಲಿಂಗಾಯತ ಪಂಚಮಸಾಲಿ ಕ್ಷೇಮಾಭಿವೃದ್ದಿ ಸಮಾಜದಿಂದ SSLC, PUC ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಾಗುವ ಹವಾಮಾನ ಅಂಶಗಳಾದ ಮಳೆಯ ಪ್ರಮಾಣ, ಮಳೆಯ ಹಂಚಿಕೆ, ತಾಪಮಾನ, ಗಾಳಿಯ ವೇಗ ಮತ್ತು ಆದ್ರ್ರತೆ ಇತ್ಯಾದಿ ಮಾಹಿತಿಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ. ಜಿಲ್ಲೆಗೆ ‘ರಿಲಯನ್ಸ್ ಇನ್ಶೂರೆನ್ಸ್ ಕಂಪನಿ’ಯನ್ನು ನಿಗದಿಪಡಿಸಲಾಗಿದೆ.
ಪ್ರತಿ ಹೆಕ್ಟೇರ್‍ಗೆ ಅಡಿಕೆ ಬೆಳೆಗೆ ₹1,28,000 ವಿಮಾ ಮೊತ್ತವಿದ್ದು, ರೈತರು ₹6,400 ಪ್ರೀಮಿಯಂ ಪಾವತಿಸಬೇಕಾಗುತ್ತದೆ. ದಾಳಿಂಬೆ ಬೆಳೆಗೆ ₹1,27,000 ವಿಮಾ ಮೊತ್ತಕ್ಕೆ ₹6,350 ಹಾಗೂ ಮಾವು ಬೆಳೆಗೆ ₹80,000 ವಿಮಾ ಮೊತ್ತಕ್ಕೆ ₹4,000 ಪ್ರೀಮಿಯಂ ಪಾವತಿಸಬೇಕಾಗತ್ತದೆ.
ವಿಮಾ ವ್ಯಾಪ್ತಿಗೆ ಒಳಪಡುವ ಬೆಳೆಗಳು ಫಸಲು ನೀಡುವ ಹಂತದಲ್ಲಿರಬೇಕು ಹಾಗೂ ಸಾಲ ಪಡೆದಿರುವ ಮತ್ತು ಸಾಲ ಪಡೆಯದ ಇಬ್ಬರೂ ರೈತರು ಈ ವಿಮೆಗೆ ಒಳಪಡಬಹುದು. ಆದರೆ, ನೋಂದಣಿ ಮಾಡಲು ಉದ್ದೇಶಿಸಿರುವ ಬೆಳೆಯು ಹಿಂದಿನ ವರ್ಷಗಳ ಅಥವಾ ಮುಂಗಾರಿನ ಬೆಳೆ ಸಮೀಕ್ಷೆಯಲ್ಲಿ ಕಂಡುಬರದಿದ್ದರೆ ಅಂತಹ ಬೆಳೆಗಳ ನೋಂದಣಿಗೆ ಅನುಮತಿ ಇರುವುದಿಲ್ಲ.
ಇದನ್ನೂ ಓದಿ: ಮರ್ಚೆಂಟ್ಸ್ ಬ್ಯಾಂಕ್ | ವರ್ಷಾಂತ್ಯದಲ್ಲಿ ಅಮೃತ ಮಹೋತ್ಸವ | ಅಧ್ಯಕ್ಷ ರಘುರಾಮರೆಡ್ಡಿ
ಅರ್ಹ ರೈತರು ಪ್ರಸ್ತುತ ಸಾಲಿನ ಪಹಣಿ ಪತ್ರಿಕೆ, ಎಫ್.ಐ.ಡಿ ಸಂಖ್ಯೆ, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಪುಸ್ತಕ (ಆಧಾರ್ ಜೋಡಣೆಯಾಗಿ ಎನ್.ಪಿ.ಸಿ.ಐ ಸಕ್ರಿಯವಾಗಿರಬೇಕು) ದಾಖಲೆಗಳೊಂದಿಗೆ ಹತ್ತಿರದ ಗ್ರಾಮ-1 ಕೇಂದ್ರ, ಬ್ಯಾಂಕುಗಳು ಅಥವಾ ಸಿ.ಎಸ್.ಸಿ ಕೇಂದ್ರಗಳಲ್ಲಿ ವಿಮೆ ಯೋಜನೆಗೆ ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

