By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ಸಿಗಬೇಕೆಂದು ಬರಗೇರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ
    ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ಸಿಗಬೇಕೆಂದು ಬರಗೇರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ 
    2 hours ago
    ಚಿತ್ರದುರ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
    ಬಾಲ್ಯ ವಿವಾಹ, ಬಲವಂತದ ಅತ್ಯಾಚಾರ | ಆರೋಪಿಗೆ 20 ವರ್ಷ ಜೈಲು ಶಿಕ್ಷೆ
    2 hours ago
    ಬಿಜೆಪಿ ನಾಯಕ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
    ಬಿಜೆಪಿ ನಾಯಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ 
    15 hours ago
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    15 hours ago
    ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
    ನಾಳೆ, ನಾಡಿದ್ದು ಚಿತ್ರದುರ್ಗಕ್ಕೆ ಸಿಎಂ ಡಿಕೆಶಿ | ಎಲ್ಲೆಲ್ಲಿ ಯಾವ ಕಾರ್ಯಕ್ರಮದಲ್ಲಿ ಭಾಗೀ ಆಗ್ತಾರೆ ಪೂರ್ಣ ಮಾಹಿತಿ…
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 25 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಹಠಾತ್ ಧನಲಾಭ
    3 hours ago
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    2 days ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    17 hours ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 day ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    6 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    7 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    1 week ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    damaged skin after waxing
    ವ್ಯಾಕ್ಸಿಂಗ್ ನಂತರ ಹಾನಿಗೊಳಗಾದ ಚರ್ಮವನ್ನು ಗುಣಪಡಿಸಲು ಹೀಗೆ ಮಾಡಿ
    59 minutes ago
    Phyllanthus amarus
    ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲನೆಲ್ಲಿ(ಫಿಲಾಂತಸ್ ಅಮರಸ್) ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
    2 hours ago
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    1 day ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    1 day ago
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    2 days ago
Reading: ದರ್ಶನ್ ಕೇಸ್ | ಸುದೀಪ್, ಉಪೇಂದ್ರ, ರಚಿತಾ ಏನೇನು ಹೇಳಿದ್ರು..!
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ದರ್ಶನ್ ಕೇಸ್ | ಸುದೀಪ್, ಉಪೇಂದ್ರ, ರಚಿತಾ ಏನೇನು ಹೇಳಿದ್ರು..!

chitradurganews.com
Last updated: 20 June 2024 00:00
chitradurganews.com
2 years ago
Share
ಸುದೀಪ್, ಉಪೇಂದ್ರ, ರಚಿತಾ
ಸುದೀಪ್, ಉಪೇಂದ್ರ, ರಚಿತಾ
SHARE

CHITRADURGA NEWS | 19 JUNE 2024

ಚಿತ್ರದುರ್ಗ: ದೇಶಾದ್ಯಂತ ಗಮನ ಸೆಳೆದಿರುವ ಚಿತ್ರದುರ್ಗದ ತುರುವನೂರು ರಸ್ತೆಯಲ್ಲಿರುವ ವಿಆರ್‍ಎಸ್ ಬಡಾವಣೆಯ ಕೆ.ಎಸ್.ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡದ ಸ್ಯಾಂಡಲ್‍ವುಡ್ ಸ್ಟಾರ್ ನಟ, ನಟಿಯರು ಪ್ರತಿಕ್ರಿಯೆ ನೀಡುತ್ತಿದ್ದಾರೆ.

ಕಳೆದೊಂದು ವಾರಿದಂದ ಕನ್ನಡ ಚಿತ್ರರಂಗದ ಮೇಲೆ ಸೂತಕದ ಕರಿಛಾಯೆ ಮೂಡಿಸಿದ್ದ ಈ ಪ್ರಕರಣದ ಬಗ್ಗೆ ಮೊದಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಧ್ವನಿ ಎತ್ತಿದೆ.

ಇದನ್ನೂ ಓದಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ್ ಬಂಧನ

ವಾಣಿಜ್ಯ ಮಂಡಳಿಯ ತಂಡ ಚಿತ್ರದುರ್ಗದ ರೇಣುಕಸ್ವಾಮಿ ಮನೆಗೆ ಬಂದು ಅವರ ಕುಟುಂಬಕ್ಕೆ 5 ಲಕ್ಷ ರೂ. ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದೆ.

ಇದೇ ವೇಳೆ ಪ್ರಕರಣ ತನಿಖೆಯ ಹಂತದಲ್ಲಿರುವುದರಿಂದ ಯಾವುದೇ ತೀರ್ಮಾನ ತೆಗೆದುಕೊಳ್ಳುವುದಿಲ್ಲ. ನಿಸ್ಪಕ್ಷಪಾತ ತನಿಖೆ ನಡೆದು ಮೃತರ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದು ಆಶಿಸಿದ್ದಾರೆ.

ಕೊಲೆ ವಿಚಾರದಲ್ಲಿ ನ್ಯಾಯಯುತ ತೀರ್ಪು ಬರಲಿ ಎಂದ ಕಿಚ್ಚ:

ಇದೆಲ್ಲಾ ಮುಗಿದ ಬೆನ್ನಲ್ಲೇ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮೊದಲು ಪ್ರಕರಣದ ಕುರಿತು ಭಾನುವಾರ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಆ ಕುಟುಂಬಕ್ಕೆ, ಹೆಣ್ಣು ಮಗುವಿಗೆ, ಬಾಳಿ ಬದುಕಬೇಕಾದ ರೇಣುಕಸ್ವಾಮಿ ಎಲ್ಲೋ ರಸ್ತೆಯಲ್ಲಿ ಬಿದ್ದಿದ್ದರಲ್ಲ ಅವರಿಗೆ ನ್ಯಾಯ ಸಿಗಬೇಕು. ಮುಂದೆ ಹುಟ್ಟಬೇಕಾಗಿರುವ ಅವರ ಮಗುವಿಗೆ ನ್ಯಾಯ ಸಿಗಬೇಕು ಎಂದು ಮಾಧ್ಯಮವರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ | ಮಗ ಪೊಲೀಸ್ ವಶಕ್ಕೆ | ತಂದೆ ಲೋ ಬಿಪಿಯಿಂದ ಸಾವು

ಮಾಧ್ಯಮದವರು ತೋರಿಸುತ್ತಿರುವುದನ್ನು ನೋಡಿ ವಿಚಾರ ತಿಳಿದುಕೊಳ್ಳುತ್ತಿದ್ದೇವೆ. ಈ ಕೊಲೆ ಪ್ರಕರಣದಲ್ಲಿ ಪೊಲೀಸರು ಹಾಗೂ ಮಾಧ್ಯಮದವರು ಸತ್ಯಾಂಶ ಹೊರತರಲು ಬಹಳಷ್ಟು ಕೆಲಸ ಮಾಡುತ್ತಿದ್ದಾರೆ ಎನ್ನುವುದರಲ್ಲಿ ಎರಡನೇ ಮಾತೇ ಇಲ್ಲ ಎಂದಿದ್ದಾರೆ.

ಮುಖ್ಯಮಂತ್ರಿಗಳೇ ಈ ಪ್ರಕರಣದ ಬಗ್ಗೆ ಹಠ ಹಿಡಿದು ಕುಳಿತಿದ್ದಾರೆ ಎಂಬ ಸುದ್ದಿ ಓದಿದ್ದೇನೆ. ಕರ್ನಾಟಕದ ದೊಡ್ಡ ಸ್ಥಾನದಲ್ಲಿರುವ ಅವರು, ಮಾಧ್ಯಮ, ಪೊಲೀಸರು ಸರಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದಾಗ ಸಾಮಾನ್ಯ ವ್ಯಕ್ತಿಯಾಗಿ ನಾನು ಅವರ ಪರ, ಇವರ ಪರ ಮಾತನಾಡುವುದು ಅಥವಾ ವಿರುದ್ಧವಾಗಿ ಮಾತನಾಡುವುದು ತಪ್ಪಾಗುತ್ತದೆ ಎಂದು ಕಿಚ್ಚ ಸುದೀಪ್ ಸ್ಪಷ್ಟಪಡಿಸಿದ್ದಾರೆ.

ವಿಚಾರಣೆ ವಿಡಿಯೋ, ಸಾಕ್ಷಿಗಳನ್ನು ತೆರೆದಿಡಬೇಕು ಎಂದ ಉಪ್ಪಿ:

ಇನ್ನೂ ನಟ, ನಿರ್ದೇಶಕ ಉಪೇಂದ್ರ ಈ ಬಗ್ಗೆ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ರೇಣುಕಸ್ವಾಮಿ ಕೊಲೆ ಪ್ರಕರಣ, ದರ್ಶನ್ ಬಂಧನ ಮತ್ತು ವಿಚಾರಣೆಯನ್ನು ಕರ್ನಾಟಕ ಮಾತ್ರವಲ್ಲ, ಇಡೀ ಭಾರತವೇ ಬೆರಗಿನಿಂದ ನೋಡುತ್ತಿದೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕುಟುಂಬದ ಜತೆ ನಾವಿದ್ದೇವೆ | ಚಲನಚಿತ್ರ ವಾಣಿಜ್ಯ ಮಂಡಳಿ

ಈ ಹೈ ಪ್ರೊಫೈಲ್ ಕೇಸ್‍ನ ವಿಚಾರಣೆಯಲ್ಲಿ ನಿಸ್ಪಕ್ಷಪಾತ ನಿರ್ಣಯ ಮತ್ತು ನ್ಯಾಯಕ್ಕಾಗಿ ಜನ ಕಾಯುತ್ತಿದ್ದಾರೆ. ರೇಣುಕಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನ ಕಾಡುತ್ತಿವೆ. ಊಹಾಪೋಹಗಳು ಹುಟ್ಟಿಕೊಳ್ಳುತ್ತಿವೆ.

ಏಕೆಂದರೆ ಯಾವುದೇ ಕೇಸ್‍ನ ವಿಚಾರಣೆಯ ವೀಡಿಯೋ ದಾಖಲೆ ಮತ್ತು ಸಾಕ್ಷಿಗಳ ಎಲ್ಲ ವಿವರಗಳನ್ನು ಪೊಲೀಸರು ಆಗಾಗ ಸಂಬಂಧಪಟ್ಟವರು, ಕುಟುಂಬದವರ ಜೊತೆ ಹಂಚಿಕೊಳ್ಳುವಂತೆ ಕಾನೂನಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ರೇಣುಕಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಿ | ರಂಭಾಪುರಿ ಶ್ರೀ ಒತ್ತಾಯ

ಹಿಂದೆ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು. ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದೆ. ಎಲ್ಲವನ್ನೂ ವೀಡಿಯೋ ಮಾಡಿ ಲೈವ್ ಸ್ಟ್ರೀಮಿಂಗ್ ಮಾಡಬಹುದು. ಈ ಸಂಬಂಧ ಕಾನೂನು ಸುಧಾರಣೆ ಆಗಬೇಕು ಎಂದಿದ್ದಾರೆ.

ಒಬ್ಬ ಸಾರ್ವಜನಿಕ ವ್ಯಕ್ತಿಯ ಕೇಸ್ ಆಗಿದ್ದರೆ ಆ ಕೇಸ್‍ನ ವಿಚಾರಣೆಯ ವೀಡಿಯೋ ಹಾಗೂ ಸಾಕ್ಷ್ಯಗಳನ್ನು ಪೊಲೀಸರು ಸಾರ್ವಜನಿಕರ ಎದುರು ತೆರೆದಿಡಬೇಕು. ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಯ ವಿಚಾರಣೆ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು. ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಎಲ್ಲವಕ್ಕೂ ಇದರಿಂದ ತೆರೆ ಎಳೆದಂತಾಗುತ್ತದೆ.

ಇದನ್ನೂ ಓದಿ: ರೇಣುಕಸ್ವಾಮಿ ಮೈಮೇಲಿದ್ದ ಕರಡಿಗೆ ಸುಳಿವು | ಆಟೋ, ಕಾರು ಕೂಡಾ ಜಪ್ತಿ

ಹೀಗಾದಾಗ ರೇಣುಕಸ್ವಾಮಿ ಕುಟುಂಬ, ಮಾಧ್ಯಮ, ಸಾರ್ವಜನಿಕರು, ಅಭಿಮಾನಿಗಳಲ್ಲಿ ಗೊಂದಲಗಳಿಲ್ಲದೆ ಪೊಲೀಸ್ ಮತ್ತು ಮಾಧ್ಯಮದ ಬಗ್ಗೆ ಗೌರವ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ.

ಧರ್ಮೋ ರಕ್ಷತಿ ರಕ್ಷಿತಃ ಎಂದ ರಚಿತ

ಕನ್ನಡ ಖ್ಯಾತ ನಟಿ ರಚಿತಾ ರಾಮ್ ತಮ್ಮ ಎಕ್ಸ್(twiter) ಖಾತೆಯಲ್ಲಿ ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಕುರಿತು ಪೋಸ್ಟ್ ಹಾಕಿದ್ದಾರೆ.

ನಟಿ ರಚಿತಾ ರಾಮ್
ನಟಿ ರಚಿತಾ ರಾಮ್

ಧರ್ಮೋ ರಕ್ಷತಿ ರಕ್ಷಿತಃ ಎಂಬ ಅಡಿ ಬರಹದೊಂದಿಗೆ ಬರೆದಿರುವ ರಚಿತಾ, ಇದನ್ನು ನಾನು ನಟಿಯಾಗಿ ಅಲ್ಲ, ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ. ಇತ್ತಿಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತುಗಳಿವು ಎಂದು ಆರಂಭಿಸಿದ್ದಾರೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕುಟುಂಬದ ಜತೆ ಸರ್ಕಾರವಿದೆ | ಗೃಹ ಸಚಿವ ಡಾ.ಜಿ.ಪರಮೇಶ್ವರ್‌

ಮೊದಲನೆಯದಾಗಿ ರೇಣುಕಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆ ಎಂಬ ಭರವಸೆ ನನಗಿದೆ ಎಂದಿರುವ ರಚಿತಾ, ಮುಂದುವರೆದು, ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿರುವ ನಟ ದರ್ಶನ್ ಸರ್ ನನಗೆ ಗುರು ಸಮಾನರು. ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದನ್ನು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕಲ್ಪಿಸಿ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹ

ಇನ್ನೇನಿದ್ದರೂ ಸತ್ಯ ಪೊಲೀಸ್ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದು ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಪ್ರಕರಣದ ವರದಿಯಲ್ಲಿ ಪಾರದರ್ಶಕವಾಗಿರುತ್ತೀರಿ ಮತ್ತು ನಿಸ್ಪಕ್ಷಪಾತವಾಗಿ ಕೆಲಸ ಮಾಡುತ್ತೀರಿ ಎಂದು ಆಶಿಸುತ್ತೇನೆ ಎಂದು ಪೋಸ್ಟ್‍ನಲ್ಲಿ ಉಲ್ಲೇಖ ಮಾಡಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

Share This Article
Facebook Email Print
Previous Article ಕಾರುಗಳು ಸಂಪೂರ್ಣ ಜಖಂ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ | ಪಲ್ಟಿಯಾಗಿ ರಸ್ತೆ ಬದಿ ಗುಂಡಿಗೆ ಬಿದ್ದ ಕಾರು
Next Article ಗ್ರಂಥಾಲಯ ವಿಜ್ಞಾನ ತರಬೇತಿ | ಅರ್ಜಿ ಆಹ್ವಾನ
Leave a Comment

Leave a Reply Cancel reply

Your email address will not be published. Required fields are marked *

damaged skin after waxing
ವ್ಯಾಕ್ಸಿಂಗ್ ನಂತರ ಹಾನಿಗೊಳಗಾದ ಚರ್ಮವನ್ನು ಗುಣಪಡಿಸಲು ಹೀಗೆ ಮಾಡಿ
Life Style
Phyllanthus amarus
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲನೆಲ್ಲಿ(ಫಿಲಾಂತಸ್ ಅಮರಸ್) ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
Life Style
ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ಸಿಗಬೇಕೆಂದು ಬರಗೇರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ
ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ಸಿಗಬೇಕೆಂದು ಬರಗೇರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ 
ಮುಖ್ಯ ಸುದ್ದಿ
ಚಿತ್ರದುರ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
ಬಾಲ್ಯ ವಿವಾಹ, ಬಲವಂತದ ಅತ್ಯಾಚಾರ | ಆರೋಪಿಗೆ 20 ವರ್ಷ ಜೈಲು ಶಿಕ್ಷೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up