ಮುಖ್ಯ ಸುದ್ದಿ
ಕೇಂದ್ರದ ಬಜೆಟ್‍ನಿಂದ ಯಾರಿಗೆ ಅನುಕೂಲ | ಹಾಲಿ, ಮಾಜಿ ಸಂಸದರು ಏನು ಹೇಳಿದ್ರು ?
CHITRADURGA NEWS | 02 FEBRUARY 2025
ಚಿತ್ರದುರ್ಗ: ಕೇಂದ್ರದ ಬಜೆಟ್ ಮಂಡನೆಯಾಗಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಿದ್ದಾರೆ. ಈ ಸಂಬಂಧ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿವೆ.
ವಿಶೇಷವಾಗಿ ಚಿತ್ರದುರ್ಗದ ಹಾಲಿ ಸಂಸದ ಗೋವಿಂದ ಕಾರಜೋಳ ಹಾಗೂ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಅವರು ಬಜೆಟ್ ಕುರಿತು ಹಂಚಿಕೊಂಡಿರುವ ಅಭಿಪ್ರಾಯಗಳು ಇಲ್ಲಿವೆ.
ಹಾಲಿ ಸಂಸದ ಗೋವಿಂದ ಕಾರಜೋಳ ಅಭಿಪ್ರಾಯ:
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಸಬ್ ಕಾ ವಿಕಾಸ್ ತತ್ವ ಒಳಗೊಂಡಿದೆ. ಜನರ ನಿರೀಕ್ಷೆಗಳನ್ನು ಸಾಕಾರಗೊಳಿಸುವತ್ತ ಈ ಬಜೆಟ್ ದಾಪುಗಾಲಿಟ್ಟಿದೆ ಎಂದು ಸಂಸದ ಗೋವಿಂದ ಎಂ.ಕಾರಜೋಳ ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ: Astrology: ದಿನ ಭವಿಷ್ಯ | ಫೆಬ್ರವರಿ 02 | ಉದ್ಯೋಗದ ವಾತಾವರಣವು ಅನುಕೂಲಕರ, ಮೌಲ್ಯದ ವಸ್ತು ಮತ್ತು ವಾಹನ ಖರೀದಿ
ಬಜೆಟ್ ಸರ್ವ ವ್ಯಾಪಿ, ಸರ್ವ ಸ್ಪರ್ಶಿಯಾಗಿದೆ. ಬಡವರು, ರೈತರು, ಮಹಿಳೆಯರು, ಯುವಕರು, ಉದ್ದಿಮೆದಾರರು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳನ್ನು ಒಳಗೊಂಡಂತೆ ಶಿಕ್ಷಣ, ಆರೋಗ್ಯ ಹೀಗೆ ಒಟ್ಟು ಪ್ರಮುಖ 10 ಕ್ಷೇತ್ರಗಳ ಅಭಿವೃದ್ದಿ ಬಗ್ಗೆ ಹೆಚ್ಚು ಗಮನ ಹರಿಸಲಾಗಿದೆ ಎಂದು ವಿಶ್ಲೇಷಿಸಿದ್ದಾರೆ.
ಈ ದೇಶದ ಬೆಳವಣಿಗೆಯನ್ನು ಹೆಚ್ಚಿಸಲು, ಮಧ್ಯಮ ವರ್ಗವನ್ನು ಬಲಪಡಿಸುವ ನಿಟ್ಟಿನಲ್ಲಿ ಇದೊಂದು ಐತಿಹಾಸಿಕ ಬಜೆಟ್ ಆಗಿದೆ. ದೇಶದ ಶೇ.70ರಷ್ಟು ಜನ ಗ್ರಾಮೀಣ ಭಾಗದಲ್ಲಿದ್ದು ಕೃಷಿ ಚಟುವಟಿಕೆಗಳ ಭಾಗವಾಗಿದ್ದಾರೆ, ಕೃಷಿ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ನಡಿ ಸಾಲ ಸೌಲಭ್ಯವನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಪ್ರಧಾನಮಂತ್ರಿ ಕೃಷಿ ಧನಧಾನ್ಯ ಯೋಜನೆಯಡಿ 1.7 ಕೋಟಿ ರೈತರಿಗೆ ಶಕ್ತಿ ತುಂಬುವ ಮೂಲಕ ಉತ್ಪಾದಕತೆಯನ್ನು ಹೆಚ್ಚುವಂತೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ನಗರಸಭೆ | ಅರ್ಹ ಮಹಿಳಾ ಸ್ವ-ಸಹಾಯ ಸಂಘಗಳನ್ನು ಆಯ್ಕೆ ಮಾಡಲು ಅರ್ಜಿ
ವೈದ್ಯಕೀಯ ಕಾಲೇಜುಗಳಲ್ಲಿ ಸೀಟು ಹೆಚ್ಚಳ, ಎಲ್ಲಾ ಸರ್ಕಾರಿ ಶಾಲೆಗಳಿಗೆ ಬ್ರಾಡ್‍ಬ್ಯಾಂಡ್ ಸೇವೆ ಒದಗಿಸುವುದಾಗಿ ತಿಳಿಸಿದ್ದಾರೆ, ಬೀದಿ ಬದಿ ವ್ಯಾಪಾರಿಗಳಿಗೆ 30 ಸಾವಿರಗಳ ಕ್ರೆಡಿಟ್ ಕಾರ್ಡ್ ಘೋಷಣೆ ಮಾಡುವ ಮೂಲಕ ಅತಿ ಸೂಕ್ಷ್ಮ ವಲಯಗಳ ಸಂಗತಿಗಳ ಬಗ್ಗೆಯೂ ಹಣಕಾಸು ಸಚಿವರು ಗಮನ ನೀಡಿದ್ದಾರೆ. ಎಲ್ಲಾ ಜಿಲ್ಲೆಗಳ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸುವ ಮಾತನಾಡಿದ್ದಾರೆ ಹಾಗೂ ಜಲ್ ಜೀವನ್ ಮಿಷನ್ ಯೋಜನೆಯನ್ನು 2028 ರವರೆಗೆ ವಿಸ್ತರಿಸುವುದಾಗಿ ಹೇಳಿರುವುದು ಸ್ವಾಗತಾರ್ಹ ಎಂದು ಕಾರಜೋಳ ತಿಳಿಸಿದ್ದಾರೆ.
ವೈಯಕ್ತಿಕ ಆದಾಯ ತೆರಿಗೆ ರಿಯಾಯಿತಿ ಮಿತಿಯನ್ನು 12 ಲಕ್ಷಕ್ಕೆ ಏರಿಕೆ ಮಾಡಿರುವುದು ಶ್ಲಾಘನೀಯ ಕ್ರಮ. ರಕ್ಷಣಾ ಕ್ಷೇತ್ರಕ್ಕೆ ಅತಿ ಹೆಚ್ಚು ಅನುದಾನ ಹಂಚಿಕೆ ಮಾಡುವ ಮೂಲಕ ಬಲಿಷ್ಟ ಭಾರತ ನಿರ್ಮಾಣ ಮಾಡುವ ವೇಗಕ್ಕ ಮತ್ತಷ್ಟು ಚುರುಕು ನೀಡಿದ್ದಾರೆ ಎಂದು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.
ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಏನು ಹೇಳಿದ್ರು..?
ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಕೊಟ್ಟೇ ಬಿಟ್ಟೇವು ಎಂಬಂತೆ ಚಿತ್ರದುರ್ಗ ಜಿಲ್ಲೆ ಜನರನ್ನು ಬಿಜೆಪಿಗರು ನಂಬಿಸಿದ್ದರು. ಈಗ ಮತ್ತೇ ವಂಚನೆ ಮುಂದುವರಿಸಿದ್ದಾರೆ ಎಂದು ಚಂದ್ರಪ್ಪ ಕಟು ಟೀಕೆ ಮಾಡಿದ್ದಾರೆ.
ಇದನ್ನೂ ಓದಿ: ಫೆ.5 ಮತ್ತು 6 ರಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಜಿಲ್ಲಾ ಪ್ರವಾಸ
ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕ ರಾಜ್ಯ ಇದೆಯೆಂಬುದನ್ನೇ ಮರೆಯಲಾಗಿದೆ. ಈ ಮೂಲಕ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಲಾಗಿದೆ. ಕುರ್ಚಿ ಉಳಿಸಿಕೊಳ್ಳಲು ಬಿಹಾರ, ಆಂಧ್ರಕ್ಕೆ ಸಿಂಹಪಾಲು ನೀಡಲಾಗಿದೆ. ಕನ್ನಡಿಗರ ಕಣ್ಣಿಗೆ ಸುಣ್ಣ ಎರಚಲಾಗಿದೆ. ಇದರ ವಿರುದ್ಧ ಪಕ್ಷಾತೀತ ಹೋರಾಟ ನಡೆಸದಿದ್ದರೇ ರಾಜ್ಯಕ್ಕೆ ಅಪಾಯ ಖಚಿತ ಎಂದು ಚಂದ್ರಪ್ಪ ಹೇಳಿಕೆಯಲ್ಲಿ ತಿಳಿಸಿದ್ದಾರೆ.