
CHITRADURGA NEWS | 06 MARCH 2026
ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡನೆ ಮಾಡಿದ ಬಜೆಟ್‌ನಲ್ಲಿ ಜಿಲ್ಲೆಯ ಮಹತ್ವಾಕಾಂಕ್ಷಿ ಯೋಜನೆ ಭದ್ರೆಗೆ ಅನುದಾನ ಎಷ್ಟೆಂಬುದು ಗೊತ್ತಿಲ್ಲ. ಆದರೆ, ಈ ವರ್ಷ ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿ ಮುಗಿಸಿ 157 ಕೆರೆಗೆ ನೀರು ಹರಿಸುವ ಭರವಸೆ ಸಿಕ್ಕಿದೆ.
ಕಳೆದ ಕೆಲ ದಿನಗಳಿಂದ ಜಿಲ್ಲೆಯ ರೈತರು ಕನಿಷ್ಟ ನಾಲ್ಕು ಸಾವಿರ ಕೋಟಿ ಅನುದಾನ ಮೀಸಲಿಡಲು ಒತ್ತಾಯಿಸಿ ಧರಣಿ, ಉಪವಾಸ ಸತ್ಯಾಗ್ರಹ, ಪ್ರತಿಭಟನೆ ಮಾಡಿದ್ದರು. ಆದರೆ, ಬಜೆಟ್‌ನಲ್ಲಿ ನಿರ್ಧಿಷ್ಟ ಮೊತ್ತದ ಭರವಸೆಯಂತೂ ಪ್ರಸ್ತಾಪವಾಗಿಲ್ಲ. ಬದಲಾಗಿ ೨೦೨೭ ರಲ್ಲಿ ನೀರು ಹರಿಸುವುದಾಗಿ ವಾಗ್ದಾನ ಮಾಡಿದಂತಿದೆ.
ಇದನ್ನೂ ಓದಿ: ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
ಸಿದ್ದು ಬಜೆಟ್‌ನಲ್ಲಿ ಜಿಲ್ಲೆಗೆ ಸಿಕ್ಕ ಯೋಜನೆಗಳ ಸಂಕ್ಷಿಪ್ತ ವಿವರ:
- ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳನ್ನು ಒದಗಿಸುವ ಬಗ್ಗೆ ಕೇಂದ್ರ ಸರ್ಕಾರದ 2023-24ರ ಆಯವ್ಯಯ ಭಾಷಣದಲ್ಲಿ ಘೋಷಿಸಿದ್ದರೂ ಸಹ ಇಲ್ಲಿಯವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ಕ್ರಮಗಳನ್ನು ಕೈಗೊಂಡಿರುವುದಿಲ್ಲ. ಆದರೂ, ರಾಜ್ಯ ಸರ್ಕಾರದ ವತಿಯಿಂದ ಈ ಯೋಜನೆಗೆ 11,343 ಕೋಟಿ ರೂ.ಗಳ ವೆಚ್ಚ ಭರಿಸಲಾಗಿದೆ. ಸುಮಾರು ಆರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಅಜ್ಜಂಪುರ ತಾಲ್ಲೂಕಿನ ಅಬ್ಬಿನಹೊಳಲು ಗ್ರಾಮದ ಭೂಸಮಸ್ಯೆಯನ್ನು ಬಗೆಹರಿಸಲಾಗಿದೆ. ಇದರಿಂದಾಗಿ 135 ಕಿ.ಮೀ ಉದ್ದದ ಚಿತ್ರದುರ್ಗ ಶಾಖಾ ಕಾಲುವೆ ಹಾಗೂ ಇದರಡಿ ಬರುವ ಫೀಡರ್ ಕಾಮಗಾರಿಗಳನ್ನು 2027ನೇ ಸಾಲಿನಲ್ಲಿ ಪೂರ್ಣಗೊಳಿಸಿ 157 ಕೆರೆಗಳನ್ನು ತುಂಬಿಸಲಾಗುವುದು ಎಂದು ಘೋಷಿಸಿದ್ದಾರೆ.
- ಚಿತ್ರದುರ್ಗ ಜಿಲ್ಲೆಯ ಬಬ್ಬೂರಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರವನ್ನು ರಾಜ್ಯಮಟ್ಟದ ʻಕೃಷಿ ಉದ್ದಿಮೆ ತರಬೇತಿ ಕೇಂದ್ರʼ ವನ್ನಾಗಿ ಉನ್ನತೀಕರಿಸಲಾಗುವುದು ಎಂದು ಘೋಷಣೆ ಮಾಡಲಾಗಿದೆ
- ಇದನ್ನೂ ಓದಿ: ವಿಜೃಂಭಣೆಯಿಂದ ಜರುಗಿದ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ತೇರು | ಲಕ್ಷಾಂತರ ಭಕ್ತರು ಭಾಗೀ..
- ಜಿಲ್ಲೆಗಳಲ್ಲಿ ತಾರಾಲಯಗಳನ್ನು ಸ್ಥಾಪಿಸಲಾಗುತ್ತಿದೆ. ಪ್ರಸ್ತುತ ಸಾಲಿನಲ್ಲಿ 6 ಹೊಸ ತಾರಾಲಯಗಳನ್ನು ವಿಜಯನಗರ, ಬಳ್ಳಾರಿ, ಚಿತ್ರದುರ್ಗ, ಯಾದಗಿರಿ, ಕೊಪ್ಪಳ ಹಾಗೂ ಬೀದರ್ ಜಿಲ್ಲೆಗಳಲ್ಲಿ ತಲಾ ನಾಲ್ಕು ಕೋಟಿ ರೂ.ಗಳಂತೆ ಒಟ್ಟು 24 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದು, ಜಿಲ್ಲೆಯ ಮಕ್ಕಳಿಗೆ ಅನುಕೂಲವಾಗಲಿದೆ.
- ʻಸಶಕ್ತ ಕರ್ನಾಟಕʼ ಕಾರ್ಯಕ್ರಮದಡಿ ಬೆಳಗಾವಿ, ಗೋಕರ್ಣ, ಚಿತ್ರದುರ್ಗ, ಹಂಪಿಯಲ್ಲಿ ರಾಷ್ಟ್ರಮಟ್ಟದ ಮ್ಯಾರಥಾನ್‌ಗಳನ್ನು ತಲಾ 10 ಲಕ್ಷ ರೂ. ವೆಚ್ಚದಲ್ಲಿ ಆಯೋಜಿಸಲಾಗುವುದು. ಇದರೊಂದಿಗೆ 10 ಜಿಲ್ಲಾ ಕೇಂದ್ರಗಳಲ್ಲಿ ತಲಾ ನಾಲ್ಕು ಲಕ್ಷ ರೂ. ವೆಚ್ಚದಲ್ಲಿ ಜಿಲ್ಲಾ ಮಟ್ಟದ ಮ್ಯಾರಥಾನ್‌ಗಳನ್ನು ಪ್ರಸಿದ್ಧ ಕ್ರೀಡಾಪಟುಗಳ ಹೆಸರಿನಲ್ಲಿ ಆಯೋಜಿಸಲು ಅನುದಾನ ಘೋಷಣೆಯಾಗಿದೆ.
- ರಾಯಚೂರು, ವಿಜಯಪುರ, ಬಾಗಲಕೋಟೆ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆ.ಜಿ.ಎಫ್ ಮತ್ತು ಚಿಕ್ಕಮಗಳೂರಿನಲ್ಲಿರುವ ಕಾರ್ಮಿಕ ರಾಜ್ಯ ವಿಮಾ (ESI) ಚಿಕಿತ್ಸಾಲಯಗಳನ್ನು ಉನ್ನತೀಕರಿಸುವ ಭರವಸೆ ನೀಡಿದ್ದು, ಜಿಲ್ಲೆಯ ಕಾರ್ಮಿಕರಿಗೆ ಅನುಕೂಲವಾಗಲಿದೆ.
- ಸರ್ಕಾರದ 11 ಪಾಲಿಟೆಕ್ನಿಕ್‌ಗಳಲ್ಲಿ ಹಾಗೂ ಚಿತ್ರದುರ್ಗ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಸ್ತುತ ಹೆಚ್ಚಿನ ಬೇಡಿಕೆ ಹಾಗೂ ಉದ್ಯೋಗಾವಕಾಶವಿರುವ ಕೋರ್ಸ್‌ಗಳಾದ AI, ಮಷಿನ್ ಲರ್ನಿಂಗ್, ಕ್ಲೌಡ್ ಕಂಪ್ಯೂಟಿಂಗ್, ಮೈನಿಂಗ್ ಇಂಜಿನಿಯರಿಂಗ್, ಆಟೋಮೇಷನ್ ಇಂಜಿನಿಯರಿಂಗ್ ಮುಂತಾದ 15 ಹೊಸ ಕೋರ್ಸ್‌ಗಳನ್ನು ಪ್ರಾರಂಭಿಸಲಾಗುವುದು.
- ಗಣಿಬಾಧಿತ ಜಿಲ್ಲೆಗಳಾದ ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ತುಮಕೂರಿನ ಎಲ್ಲಾ ತಾಲ್ಲೂಕುಗಳಲ್ಲಿ ಸಮಗ್ರ ಆರೋಗ್ಯ ಸೇವೆಗಳನ್ನು KMERC ಅನುದಾನದಡಿಯಲ್ಲಿ ವಿಸ್ತರಿಸಲಾಗುತ್ತದೆ.
- ಪ್ರಸಕ್ತ ಸಾಲಿನಲ್ಲಿ ಹಿರಿಯೂರು ನಗರದಲ್ಲಿ ಹೊಸದಾಗಿ ಸಂಚಾರ ಪೊಲೀಸ್ ಠಾಣೆ ಸ್ಥಾಪನೆ ಮಾಡುವ ಭರವಸೆ ನೀಡಿದ್ದಾರೆ.
- ಹೊಸದುರ್ಗ, ಚಳ್ಳಕೆರೆ ಮತ್ತು ಹಿರಿಯೂರಿನಲ್ಲಿ ಪ್ರಸಕ್ತ ವರ್ಷ ಹೊಸ ಶ್ರಮಿಕ ವಸತಿ ಶಾಲೆ ಪ್ರಾರಂಭ ಮಾಡುವ ಭರವಸೆ ಸಿಕ್ಕಿದೆ.
- ಇದರೊಟ್ಟಿಗೆ ನೀರಾವರಿ ಇಲಾಖೆಯಿಂದ ಚಳ್ಳಕೆರೆ ತಾಲೂಕಿನಲ್ಲಿ ವೇದಾವತಿ ನದಿಗೆ ಮೂರು ಬ್ಯಾರೇಜ್ ಕಂ ಬ್ರಿಡ್ಜ್ ನಿರ್ಮಿಸಲಾಗುತ್ತದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

