
CHITRADURGA NEWS | 27 JUNE 2024
ಚಿತ್ರದುರ್ಗ: ರಾಜ್ಯ ಸರ್ಕಾರ ರೈತರಿಗೆ ಹಾಲಿನ ಪ್ರೋತ್ಸಾಹ ಧನ ನೀಡಿಲ್ಲ, ಯಾವಾಗ ಕೊಡ್ತೀರಾ ಎಂದು ಬಿಜೆಪಿ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ವೆಂಟಕೇಶ್ ಯಾದವ್ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಸುರಕ್ಷತಾ ನಿಯಮ ಪಾಲಿಸಿ ಗೃಹ ಬಳಕೆ ವಿದ್ಯುತ್ ಅವಘಡ ತಪ್ಪಿಸಿ
ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಕಳೆದ ಬಜೆಟ್ ನಲ್ಲಿ ಪ್ರೋತ್ಸಾಹ ಧನಕ್ಕೆ ಬಿಡುಗಡೆಯಾಗಿದ್ದ ಹಣವನ್ನು ಪಶುಪಲನಾ ಇಲಾಖೆ ಇತರೆ ಖರ್ಚು ವೆಚ್ಚಗಳಿಗೆ ರಾಜ್ಯ ಸರ್ಕಾರ ಬಳಕೆಮಾಡಿಕೊಂಡಿದೆ, ಆದರೆ ರೈತರಿಗೆ ಹಾಲಿನ ಪ್ರೋತ್ಸಾಹ ನೀಡುತ್ತಿಲ್ಲ.
ಹಾಲಿನ ದರವನ್ನು ರೂ.4ರಷ್ಟನ್ನು ಏರಿಸಿ ಆ ಹಣವನ್ನು ರೈತರಿಗೆ ತಲುಪಿಸಲಾಗುವುದು ಎಂದು ಹೇಳಿಕೆ ಕೊಟ್ಟು, ಏಕೆ ರೈತರಿಗೆ ತಲುಪಿಸಿಲ್ಲ. ಮತ್ತೆ ಈಗ ಅದೇ ಕಾರಣವನ್ನು ನೀಡಿ 2 ರೂ ಹೆಚ್ಚಿಸಲಾಗಿದೆ. ಒಟ್ಟು ಈ 6 ರೂಗಳನ್ನು ಯಾವಾಗ ರೈತರಿಗೆ ನೀಡುತ್ತೀರಾ ಎಂದು ಸರ್ಕಾರವನ್ನು ವೆಂಕಟೇಶ್ ಯಾದವ್ ಪ್ರಶ್ನಿಸಿದ್ದಾರೆ ಈ ಎಲ್ಲಾ ಪ್ರಶ್ನೆಗಳಿಗೆ ಸರ್ಕಾರ ಉತ್ತರವನ್ನು ನೀಡುವಂತೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಆರೋಗ್ಯ ಇಲಾಖೆ | ಲಾರ್ವಾ ಸಮೀಕ್ಷೆಗೆ ಸ್ವಯಂಸೇವಕರ ಆಯ್ಕೆಗೆ ಅರ್ಜಿ ಆಹ್ವಾನ
ಬಾಕಿ ಉಳಿದಿರುವ ಎಂಟು ತಿಂಗಳ ಹಣವನ್ನು ಯಾವಾಗ ಕೊಡುತ್ತಾರೆ ಎಂದು ರೈತರು ಪ್ರಶ್ನಿಸಿದರೆ, ಹಾಲು ಒಕ್ಕೂಟದ ಅಧಿಕಾರಿಗಳು ಸಹಕಾರಿ ಇಲಾಖೆಯತ್ತ ಬೊಟ್ಟು ಮಾಡುತ್ತಾರೆ. ಸಹಕಾರ ಇಲಾಖೆಯವರು ಆರ್ಥಿಕ ಇಲಾಖೆ ಮೇಲೆ ಬೊಟ್ಟು ಮಾಡುತ್ತಾರೆ. ಈ ಗೊಂದಲದ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ಹಾಲಿನ ಪ್ರೋತ್ಸಹ ಧನವೂ ಇಲ್ಲ.ಬರ ಪರಿಹಾರದ ಹಣವೂ ಇಲ್ಲ, ಬಿತ್ತನೆ ಬೀಜಗಳ ಬೆಲೆ ಏರಿಕೆಯಾಗಿದೆ. ಭೂ ಸಿರಿ ಯೋಜನೆಯನ್ನು ನಿಲ್ಲಿಸಲಾಗಿದೆ, ರೈತ ವಿದ್ಯಾನಿಧಿ ಯೋಜನೆಯನ್ನು ನಿಲ್ಲಿಸಲಾಗಿದೆ. ದುಪ್ಪಟ್ಟು ಹಣವನ್ನು ಟ್ರಾನ್ಸ್ ಫಾರ್ಮರ್ ಗಳಿಗೆ ನೀಡುವಂತಾಗಿದೆ, ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಕೆ ಮಾಡಲಾಗಿದೆ,
ಮುದ್ರಾಂಕ ದರವನ್ನು ಏರಿಸಿದೆ, ಆಸ್ತಿ ನೋಂದಣಿ ಶೇ.30 ರಷ್ಟು ಹೆಚ್ಚಾಗಿದೆ, ಕ್ಷೀರ ಸಮೃದ್ಧಿ ಬ್ಯಾಂಕ್ ಯಾಕೆ ಪ್ರಾರಂಭಿಸಿಲ್ಲ, 824 ರೈತರ ಆತ್ಮ ಹತ್ಯೆಗೆ ಕಾರಣಗಳೇನು? ಮತ್ತು ರೈತರಿಗೆ ಅತ್ಯಂತ ನಿಕಟ ವಾಗಿರುವ ಇಲಾಖೆ ಕಂದಾಯ ಇಲಾಖೆ, ಆ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಕೇಳಿ ಬರುತ್ತಿದೆ ಎಂದಿದ್ದಾರೆ.
ಇದನ್ನೂ ಓದಿ: ಈ ವರ್ಷವೂ ಚಿತ್ರದುರ್ಗಕ್ಕೆ ಭದ್ರೆ ಹರಿಯುವುದು ಅನುಮಾನ | ಅಬ್ಬಿನಹೊಳಲು ಬಳಿ ಶೇ.9 ರಷ್ಟು ಮಾತ್ರ ಕಾಮಗಾರಿ
ಬಿಜೆಪಿಗೆ 40 ಪರ್ಸೆಂಟ್ ಸರ್ಕಾರ ಎಂದಿದ್ದ ಕಾಂಗ್ರೆಸ್ ಈಗ ಅದೇ ಆರೋಪ ಎದುರಿಸುತ್ತಿದೆ. ಬೆಲೆ ಏರಿಕೆಯನ್ನು ಬಳುವಳಿಯಾಗಿ ಕೊಟ್ಟ ಕಾಂಗ್ರೆಸ್ ಸರ್ಕಾರ ವಿದ್ಯುತ್ ದರ, ಪಶು ಆಹಾರಕ್ಕೆ, ಪ್ರತಿ ಮೆಟ್ರಿಕ್ ಟನ್ಗೆ ರೂ. 500 ಹೆಚ್ಚಿಸಿದೆ ಎಂದು ಸರ್ಕಾರದ ಕ್ರಮವನ್ನು ಟೀಕಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
