ಮುಖ್ಯ ಸುದ್ದಿ
ಚಿತ್ರದುರ್ಗ ಮೆಡಿಕಲ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿಗಳ ವೈಟ್‍ಕೋಟ್ ಸಮಾರಂಭ
ಚಿತ್ರದುರ್ಗ ನ್ಯೂಸ್.ಕಾಂ: ಚಿತ್ರದುರ್ಗ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಮೊದಲ ಬ್ಯಾಚ್ ವಿದ್ಯಾರ್ಥಿಗಳ ವೈಟ್‍ಕೋಟ್ ಸಮಾರಂಭ ಡಿ.22ರಂದು ಬೆಳಿಗ್ಗೆ 10.30ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ವೈಟ್‍ಕೋಟ್ ಸಮಾರಂಭವು, ವಿದ್ಯಾರ್ಥಿಗಳಿಗೆ ವೈದ್ಯಕೀಯ ವೃತ್ತಿ ಅಂಗೀಕಾರದ ವಿಧಿಯಾಗಿದೆ. ಸಮಾರಂಭದಲ್ಲಿ ಪ್ರತಿ ವಿದ್ಯಾರ್ಥಿಯ ಭುಜದ ಮೇಲೆ ಬಿಳಿ ಕೋಟ್‍ನ್ನು ಧರಿಸಲಾಗುತ್ತದೆ.
ರಾಷ್ಟ್ರೀಯ ವೈದ್ಯಕೀಯ ಆಯೋಗದನ್ವಯ ಈ ಸಮಾರಂಭದಲ್ಲಿ ಮಹರ್ಷಿ ಚರಕ ಶಪತವನ್ನು ಬೋಧಿಸಲಾಗುತ್ತದೆ. ಈ ಸಮಾರಂಭ ವೈದ್ಯಕೀಯ ವಿದ್ಯಾರ್ಥಿಗಳ ವೈದ್ಯಕೀಯ ವೃತ್ತಿಪರ ಪ್ರವೇಶ ಸೂಚಿಸುತ್ತದೆ ಎಂದು ಚಿತ್ರದುರ್ಗ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ವಿಶೇಷಾಧಿಕಾರಿ ಡಾ.ಬಿ.ವೈ.ಯುವರಾಜ್ ತಿಳಿಸಿದ್ದಾರೆ.
ಇದನ್ನೂ ಓದಿ: ಜಿಲ್ಲಾ-ತಾಲೂಕು ಪಂಚಾಯಿತಿಗೆ ಸದ್ಯದಲ್ಲೇ ಚುನಾವಣೆ
ಕಾರ್ಯಕ್ರಮದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣ ಸ್ವಾಮಿ ಘನ ಉಪಸ್ಥಿತಿವಹಿಸುವರು. ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಕಾರ್ಯಕ್ರಮಮ ಉದ್ಘಾಟಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಡಾ.ಎಂ.ಚಂದ್ರಪ್ಪ, ಎನ್.ವೈ.ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ.ನಾರಾಯಣಸ್ವಾಮಿ, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್ ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ದಾವಣಗೆರೆ ವಿಶ್ವವಿದ್ಯಾನಿಲಯ ಉಪಕುಲಪತಿ ಡಾ.ಬಿ.ಡಿ.ಕುಂಬಾರ್, ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಉಪಕುಲಪತಿ ಡಾ.ಎಂ.ಕೆ.ರಮೇಶ್, ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಕ್ತರ್, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ವೈದ್ಯಕೀಯ ನಿರ್ದೇಶನಾಲಯ ನಿರ್ದೇಶಕ ಡಾ.ಸುಜಾತಾ ರಾಥೋಡ್, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿ.ಪಂ.ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇಂದ್ರ ಕುಮಾರ್ ಮೀನಾ ಭಾಗವಹಿಸುವರು.