
CHITRADURGA NEWS | 01 AUGUST 2025
ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳಿಗೆ ಒಪ್ಪಂದದ ಅನುಸಾರ ಟೋಲ್ ಅನ್ನು ಸಂಗ್ರಹಿಸಲಾಗುತ್ತಿದೆ. ಕೆಲವೆಡೆ ರಸ್ತೆಗಳು ಬಹಳಷ್ಟು ಹಾಳಾಗಿದ್ದು, ಅದನ್ನು ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ, ರಸ್ತೆ ಕಾಮಗಾರಿಗಳಿಗಾಗಿ ಮಾರ್ಗ ಬದಲಾಯಿಸಿ, ಸಂಚಾರ ದಟ್ಟಣೆ ಹಾಗೂ ಅಪಘಾತಗಳು ಕೂಡ ಸಂಭವಿಸುತ್ತಿವೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇದನ್ನೂ ಓದಿ: ಗಾಂಧಿ ವೃತ್ತದಲ್ಲಿ ಬಹು ಮಹಡಿ ಪಾರ್ಕಿಂಗ್ ಕಟ್ಟಡ ನಿರ್ಮಾಣಕ್ಕೆ ಡಿಪಿಆರ್
ಟೋಲ್ ಸಂಗ್ರಹಣೆ ಕೇಂದ್ರಗಳ ಪೈಕಿ ಅರ್ಧದಷ್ಟು ಕೇಂದ್ರಗಳನ್ನು ಬಂದ್ ಮಾಡಿ, ಕೇವಲ ಒಂದೆರಡು ಕೇಂದ್ರಗಳನ್ನು ಮಾತ್ರ ತೆರೆಯುವುದರಿಂದ, ವಾಹನ ದಟ್ಟಣೆ ಉಂಟಾಗುತ್ತಿದೆ. ವಿಐಪಿ, ಆ್ಯಂಬುಲೆನ್ಸ್ ವಾಹನಗಳು ಸಂಚರಿಸುವ ಮಾರ್ಗದಲ್ಲಿ ಲಾರಿ, ಟ್ರಕ್‍ಗಳು ಕೂಡ ಪ್ರವೇಶ ಮಾಡುತ್ತಿವೆ.
ಇದರಿಂದಾಗಿ ವಿಐಪಿ, ಆಂಬುಲೆನ್ಸ್‍ಗಳು ಟೋಲ್ ಮಾರ್ಗ ಪ್ರವೇಶಿಸಲು ಕಾಯುವಂತಹ ಸ್ಥಿತಿ ಇರುತ್ತದೆ. ರಸ್ತೆಗಳು ಸಮರ್ಪಕವಾಗಿ ಇಲ್ಲದೇ ಇರುವ ಸಂದರ್ಭಗಳಲ್ಲಿ ಟೋಲ್ ಸಂಗ್ರಹ ಮಾಡಬಾರದು ಎಂಬುದಾಗಿ ಇತ್ತೀಚೆಗೆ ನ್ಯಾಯಾಲಯ ತೀರ್ಪು ನೀಡಿದೆ. ಹೀಗಿದ್ದಾಗ, ರಸ್ತೆ ಸರಿ ಇಲ್ಲದ ಕಡೆಗಳಲ್ಲಿ ಟೋಲ್ ಏಕೆ ಸಂಗ್ರಹಿಸುತ್ತೀರಿ ಎಂದು ಜಿಲ್ಲಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

