CHITRADURGA NEWS | 19 SEPTEMBER 2026
ಚಿತ್ರದುರ್ಗ: ಗ್ರಾಮೀಣ ಭಾಗದ ಮಹಿಳೆಯರು ಹೆಚ್ಚು ಶಿಕ್ಷಿತರಾಗುತ್ತಿರುವುದು ಸಂತಸದ ವಿಷಯವಾಗಿದ್ದು, ವಿದ್ಯಾರ್ಥಿನಿಯರು ತಮ್ಮಲ್ಲಿರುವ ಸಾಮಥ್ರ್ಯವನ್ನು ಸಮರ್ಪಕವಾಗಿ ಬಳಸಿಕೊಂಡು ಯಶಸ್ಸು ಸಾಧಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಹೇಳಿದರು.
ಇದನ್ನೂ ಓದಿ: ಪರಿಸರ ಸ್ವಚ್ಛತೆಯಿಂದ ಆರೋಗ್ಯಕರ ಸಮಾಜ ನಿರ್ಮಾಣ | ಕೆ.ಜಯಲಕ್ಷ್ಮಮ್ಮ
ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಶುಕ್ರವಾರ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ದಾವಣಗೆರೆ ವಿಶ್ವವಿದ್ಯಾನಿಲಯ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಐಕ್ಯೂಎಸಿ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ 2026-27ನೇ ಶೈಕ್ಷಣಿಕ ಸಾಲಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನೆರವೇರಿಸಿ ಅವರು ಮಾತನಾಡಿದರು.
ತರಗತಿಯ ಅಕಾಡೆಮಿಕ್ ಕಲಿಕೆಯಷ್ಟೇ ಸಮಾಜದಿಂದ ಕಲಿಯುವುದು ಕೂಡ ಅತ್ಯಂತ ಮುಖ್ಯವಾಗಿದೆ. ಕೇವಲ ಪುಸ್ತಕದ ಬದಕಿಗಷ್ಟೇ ಸೀಮಿತವಾಗದೇ, ಸಮಾಜದ ಅನುಭವಗಳಿಂದ ಜ್ಞಾನ ಮತ್ತು ಸಾಮಾನ್ಯ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು. ಇವುಗಳೇ ನಿಮ್ಮ ಜೀವನವನ್ನು ಯಶಸ್ಸಿನತ್ತ ಕೊಂಡೊಯ್ಯಲು ಸಹಕಾರಿಯಾಗಲಿವೆ ಎಂದು ತಿಳಿಸಿದರು.
ಕುವೆಂಪು ಭಾಷಾ ಪ್ರಾಧಿಕಾರದ ಸದಸ್ಯರು ಹಾಗೂ ನಿವೃತ್ತ ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಮಾತನಾಡಿ, ಮಹಿಳೆಯರ ಪ್ರಗತಿ ಮತ್ತು ಸುರಕ್ಷೆ ಸಮಾಜದ ಜವಾಬ್ದಾರಿ ಎಂದು ಹೇಳಿದರು.
ಇದನ್ನೂ ಓದಿ: ಚಿತ್ರದುರ್ಗದಲ್ಲಿಂದು ಪ್ರಾಜೆಕ್ಟ್ ಪಂಚತಂತ್ರ ನಾಟಕ ಪ್ರದರ್ಶನ
ಹೆಣ್ಣು ಮಕ್ಕಳು ತಮಗೆ ವಿಧಿಸಿರುವ ಕಟ್ಟುಪಾಡುಗಳನ್ನು, ಅಸಮಾನತೆಗಳನ್ನು ಪ್ರಶ್ನಿಸಬೇಕು. ಪ್ರಶ್ನಿಸುವ ಮನೋಭಾವವೇ ಪ್ರಗತಿಯ ಮೂಲ. ಮಹಿಳೆಯರಿಗೆ ಅನುಕಂಪ ಬೇಕಿಲ್ಲ. ತನ್ನ ಸಾಮಥ್ರ್ಯವನ್ನು ಸಾಬೀತು ಪಡಿಸಲು ಸುರಕ್ಷಿತ ಮತ್ತು ಮುಕ್ತ ಅವಕಾಶ ಬೇಕು.
ಅಕ್ಷರ ಕಲಿತ ಮಹಿಳೆ ತನ್ನ ಹಕ್ಕುಗಳ ಬಗ್ಗೆ ಅರಿವನ್ನು ಪಡೆಯಬೇಕು. ಗಂಡು ಮತ್ತು ಹೆಣ್ಣಿನ ನಡುವೆ ಇರುವುದು ಜೈವಿಕ ವ್ಯತ್ಯಾಸವೇ ಹೊರತು ಬೌದ್ಧಿಕ ವ್ಯತ್ಯಾಸವಲ್ಲ. ಆಧುನಿಕತೆಯು ಮಹಿಳೆಯರ ಬದುಕಿನಲ್ಲಿ ಶಿಕ್ಷಣ, ಉದ್ಯೋಗ, ಪ್ರತಿಭಟನೆ ಮತ್ತು ಸಾಮಾಜಿಕ ಸ್ವಾತಂತ್ರ್ಯದ ಮೂಲಕ ಮಹತ್ವದ ಬದಲಾವಣೆಗಳನ್ನು ತಂದಿದೆ ಎಂದು ಅಭಿಪ್ರಾಯಪಟ್ಟರು.
ಉನ್ನತ ಶಿಕ್ಷಣದಲ್ಲಿ ಮಹಿಳೆಯರ ದಾಖಲಾತಿ ಪ್ರಮಾಣ ನಿರಂತರವಾಗಿ ಹೆಚ್ಚಾಗುತ್ತಿದೆ. ಫಲಿತಾಂಶದಲ್ಲಿಯೂ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ. ವಿಜ್ಞಾನ, ತಂತ್ರಜ್ಞಾನ, ರಾಜಕೀಯ, ಸಾಹಿತ್ಯ, ಸಂಘಟನೆ ಒಳಗೊಂಡಂತೆ ವಿವಿಧ ಕ್ಷೇತ್ರಗಳಲ್ಲಿ ಮಹತ್ವದ ಸಾಧನೆ ಮಾಡುತ್ತಿದ್ದಾರೆ. ಜಗತ್ತಿನಲ್ಲಿ ಮಹಿಳೆಯರ ವಿಷಯಗಳು ಪ್ರಸ್ತುತವಾಗುತ್ತಿವೆ. ಇದೆಲ್ಲಾ ಸಾಧ್ಯವಾದದ್ದು ಮಹಿಳೆಯರ ದೃಢ ಸಂಕಲ್ಪ ಮತ್ತು ಕಠಿಣ ಪರಿಶ್ರಮದಿಂದ ಸಾಧ್ಯವಾಯಿತು.
ಇದನ್ನೂ ಓದಿ: SIR | ಚಿತ್ರದುರ್ಗ ಜಿಲ್ಲೆಯಲ್ಲಿ 64,611 ಮತದಾರರಿಗೆ ನೋಟಿಸ್ ಜಾರಿ
ಸಾಧನೆಗೆ ಸರ್ಕಾರದಿಂದ ಸಂಘ ಸಂಸ್ಥೆಗಳಿಂದ ಹಲವಾರು ಯೋಜನೆಗಳಿವೆ. ಇವುಗಳ ಹೊರತಾಗಿಯೂ ಮಹಿಳೆಯರಿಗೆ ನಿರಂತರ ಸವಾಲುಗಳು ಹಾಗೂ ನಿಬರ್ಂಧಗಳಿವೆ. ಗ್ರಾಮೀಣ ಭಾಗದಿಂದ ಬಂದವರು ಅದರಲ್ಲೂ ಅಂಚಿನಲ್ಲಿರುವ ಸಾಮಾಜಿಕ ಗುಂಪುಗಳಿಂದ ಬಂದವರು ಸಂಕೀರ್ಣವಾದ ಅನಾನುಕೂಲತೆಗಳನ್ನು ಎದುರಿಸುತ್ತಿದ್ದಾರೆ. ಜೊತೆಗೆ ಸುರಕ್ಷತೆಯ ಕೊರತೆಯಿದೆ.
ಮಹಿಳೆಯರ ಮೇಲಿನ ದೌರ್ಜನ್ಯ ದೊಡ್ಡ ಸವಾಲಾಗಿದೆ. ಡಿಜಿಟಲ್ ಜಗತ್ತಿನ ಸೈಬರ್ ಅಪರಾಧಗಳು ಹೆಚ್ಚಾಗುತ್ತಿವೆ. ಇವೆಲ್ಲವುಗಳನ್ನು ಎದುರಿಸುತ್ತಲೇ ತಮ್ಮ ಹಕ್ಕುಗಳ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕಿದೆ. ಎಲ್ಲಾ ವಲಯಗಳಲ್ಲಿ ಸ್ವಾವಲಂಬಿಗಳಾಗಬೇಕಿದೆ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲ ಡಾ.ಶಿವಣ್ಣ, ನಿವೃತ್ತ ಪ್ರಾಂಶುಪಾಲ ಡಾ.ಚನ್ನಕೇಶವ, ಮಹಿಳಾ ಸಬಲೀಕರಣ ಸಮಿತಿ ಸಂಚಾಲಕಿ ಡಾ.ಕೆ.ಜಯಲಕ್ಷ್ಮಮ್ಮ, ಅಧ್ಯಾಪಕ ಕಾರ್ಯದರ್ಶಿ ಡಾ.ಪಿ.ಎನ್.ಮಧುಸೂದನ, ಯುಯುಸಿಎಂಎಸ್ ಸಂಚಾಲಕಿ ಡಾ.ಆರ್.ವಿಜಯಲಕ್ಷ್ಮಿ, ಐಕ್ಯೂಎಸಿ ಸಂಚಾಲಕ ಹಲಸಂದಿ ಸತೀಶ, ಸಾಂಸ್ಕøತಿಕ ಸಮಿತಿ ಸಂಚಾಲಕಿ ಡಾ.ಟಿ.ಗಾಯತ್ರಮ್ಮ, ರೆಡ್‍ಕ್ರಾಸ್ ಘಟಕ ಸಂಚಾಲಕ ಎಸ್.ಕನಕರಾಜ್, ಉದ್ಯೋಗ ಭರವಸೆ ಕೋಶ ಸಂಚಾಲಕ ಎಂ.ಗಿರೀಶ್, ಎನ್‍ಎಸ್‍ಎಸ್ ಸಂಚಾಲಕ ಡಾ.ಎಸ್.ಕೆ.ಯೋಗಾನಂದ, ಕ್ರೀಡಾ ಸಮಿತಿ ಸಂಚಾಲಕ ಆರ್.ಶಿವಪ್ರಸಾದ್, ಪತ್ರಾಂಕಿತ ವ್ಯವಸ್ಥಾಪಕ ಆರ್.ವೆಂಕಟೇಶ್, ಅತಿಥಿ ಉಪನ್ಯಾಸಕ ಡಾ.ಎನ್.ಯಶೋಧ ಸೇರಿದಂತೆ ವಿದ್ಯಾರ್ಥಿನಿಯರು, ಬೋಧಕ-ಬೋಧಕೇತರ ಸಿಬ್ಬಂದಿ ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

