CHITRADURGA NEWS | 06 February 2026
ಚಿತ್ರದುರ್ಗ: ಬೀದರ್ ನಿಂದ ಚಾಮರಾಜನಗರದವರೆಗೆ ಪ್ರವಾಸ ಕೈಗೊಂಡು ರಾಜ್ಯ ಸರ್ಕಾರಿ ಮಹಿಳಾ ನೌಕರರನ್ನು ಸಂಘಟಿಸಲಾಗುವುದೆಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ರೋಶಿನಿಗೌಡ ತಿಳಿಸಿದರು.
ಇದನ್ನೂ ಓದಿ: ದಿನ ಭವಿಷ್ಯ | 06 ಫೆಬ್ರವರಿ | ಹಠಾತ್ ಆರ್ಥಿಕ ಲಾಭದ ಸೂಚನೆ, ಹೊಸ ವಾಹನ ಖರೀದಿ
ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಸದ ಸಂದರ್ಭದಲ್ಲಿ ಸದಸ್ಯತ್ವ ಅಭಿಯಾನ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಗುವುದು. ಮಹಿಳೆಯರಿಗೆ ವೈದ್ಯಕೀಯ ತಪಾಸಣೆ, ಕಾನೂನು ಅರಿವು ಕುರಿತು ಕಾರ್ಯಾಗಾರ ನಡೆಸುವ ಮೂಲಕ ಜಾಗೃತಿ ಮೂಡಿಸಲಾಗುವುದು.
ಮಹಿಳಾ ನೌಕರರ ಮೇಲೆ ಹಲ್ಲೆ, ಕಿರುಕುಳ, ದೌರ್ಜನ್ಯ ನಡೆಸುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗುವುದೆಂದರು.
ಸಂಘಟನೆ ಹುಟ್ಟಿಕೊಂಡು ಎರಡುವರೆ ವರ್ಷಗಳಾಗಿದೆ. ರಾಜ್ಯದ 20 ಜಿಲ್ಲೆಗಳಲ್ಲಿ ಸಂಘಟನೆಯಿದೆ. ಉಳಿದ ಜಿಲ್ಲೆಗಳಲ್ಲಿಯೂ ಸರ್ಕಾರಿ ಮಹಿಳಾ ನೌಕರರನ್ನು ಸಂಘಟಿಸಿ ಸ್ವಾಭಿಮಾನ, ರಕ್ಷಣೆ, ಬದ್ದತೆ, ಹೇಗೆ ಹಕ್ಕು ಪ್ರತಿಪಾದಿಸಬೇಕೆನ್ನುವುದರ ಕುರಿತು ಅರಿವು ಮೂಡಿಸಲಾಗುವುದು. ಆರೋಗ್ಯ ಸಂಜೀವಿನಿ ಯೋಜನೆ ಪುನರ್ ಪರಿಶೀಲಿಸುವುದು ಸೇರಿದಂತೆ ಎನ್.ಪಿ.ಎಸ್. ರದ್ದುಪಡಿಸಿ ಓ.ಪಿ.ಎಸ್. ಯೋಜನೆ ಜಾರಿಗೆ ತರುವಂತೆ ಸರ್ಕಾರವನ್ನು ಆಗ್ರಹಿಸಲಾಗುವುದು ಎಂದರು.
ಇದನ್ನೂ ಓದಿ: 16 ಜೋಡಿ ಸಾಮೂಹಿಕ ಕಲ್ಯಾಣ | ಮುರುಘಾ ಮಠದ ಅನುಭವ ಮಂಟಪದಲ್ಲಿ ಮದುವೆ
ಮುಂದಿನ ಅಧಿವೇಶನದಲ್ಲಿ ಋತುಚಕ್ರ ರಜೆ ಕಾಯಿದೆ ಜಾರಿಗೆ ತರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭರವಸೆ ನೀಡಿದ್ದಾರೆ. ಸೆ.13 ರನ್ನು ಮಹಿಳಾ ನೌಕರರ ದಿನಾಚರಣೆಯೆಂದು ಘೋಷಿಸುವಂತೆ ಸರ್ಕಾರವನ್ನು ಕೇಳಿದ್ದೇವೆ. ಶಿಶುಪಾಲನಾ ಕೇಂದ್ರ ಸ್ಥಾಪನೆಗೂ ನಮ್ಮ ಬೇಡಿಕೆಯಿದೆ ಎಂದು ರೋಶಿನಿಗೌಡ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಎಂ.ಸುಶ್ಮರಾಣಿ, ರಾಜ್ಯ ಖಜಾಂಚಿ ಡಾ.ವೀಣಾ ಕೃಷ್ಣಮೂರ್ತಿ, ಸಂಘಟನಾ ಕಾರ್ಯದರ್ಶಿಗಳಾದ ಮಂಜುಳ, ಲಲಿತಮ್ಮ, ಎಂ.ಆಶಾರಾಣಿ, ಡಾ.ವಿಜಯಲಕ್ಷ್ಮಿ ಚಳ್ಳಕೆರೆ ತಾಲ್ಲೂಕು ಅಧ್ಯಕ್ಷೆ ಕರಿಯಮ್ಮ ಹಾಜರಿದ್ದರು.



________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
