CHITRADURGA NEWS | 08 APRIL 2026
ಚಿತ್ರದುರ್ಗ: ನಗರದ ಎಸ್.ಜೆ.ಎಂ.ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮಟ್ಟದ ವನಿತೆಯರ ಬೇಸ್‌ಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.

ಇದನ್ನೂ ಓದಿ: ಕಲಾವಿದ ಪಿ.ಆರ್.ತಿಪ್ಪೇಸ್ವಾಮಿ ಪುಣ್ಯಸ್ಮರಣೆ | ಸ್ಮಾರಕದ ಬಳಿ ಪೂಜೆ ಸಲ್ಲಿಕೆ
ಪಂದ್ಯಾವಳಿಗೆ ಚಾಲನೆ ನೀಡಿದ ಪ್ರಾಚಾರ್ಯರಾದ ಡಾ. ಭರತ್ ಪಿ ಬಿ ಮಾತನಾಡಿ, ಅಧ್ಯಯನದ ಜೊತೆಗೆ ಕ್ರೀಡಾ ಚಟುವಟಿಕೆಗಳು ಸಮಾನವಾಗಿ ಮುಖ್ಯವಾಗಿದ್ದು, ಜ್ಞಾನರ್ಜನೆಯೊಂದಿಗೆ ನಿಮ್ಮ ಕನಸುಗಳನ್ನು ನನಸಾಗಿಸಿಕೊಳ್ಳುವುದು ಹಾಗೂ ನಿಮ್ಮ ಯಶಸ್ಸು ನಿಮ್ಮ ಕೈಯಲ್ಲಿದೆ.
ಜೀವನದಲ್ಲಿ ಎದುರಾಗಬಹುದಾದ ಸಮಸ್ಯೆಗಳಿಂದ ಹೊರಬರಲು ಸರಿಯಾದ ಯೋಜನೆ ಹಾಗೂ ನಿರಂತರ ಪರಿಶ್ರಮ ಅಗತ್ಯ ಎಂದು ತಿಳಿಸಿದರು.
ಇದನ್ನೂ ಓದಿ: ನಿರ್ಮಿತಿ ಕೇಂದ್ರದ ನಿವೃತ್ತ ಅಕೌಂಟೆಂಟ್ ಸುಶೀಲಮ್ಮ ಮನೆಯಲ್ಲಿ ಸಿಕ್ಕ ಆಸ್ತಿ ಎಷ್ಟು ಗೊತ್ತಾ ?
ಪಂದ್ಯಾವಳಿಯಲ್ಲಿ 10ಕ್ಕೂ ಹೆಚ್ಚು ತಂಡಗಳು ಭಾಗವಹಿಸಿವೆ. ದೈಹಿಕ ಶಿಕ್ಷಣ ನಿರ್ದೇಶಕ ಡಾ.ಕೆ.ಕುಮಾರಸ್ವಾಮಿ, ತರಬೇತುದಾರ ಗೋಪಿನಾಥ್, ವಿವಿಧ ಕಾಲೇಜುಗಳ ದೈಹಿಕ ಶಿಕ್ಷಣ ನಿರ್ದೇಶಕರು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
