CHITRADURGA NEWS | 18 MARCH 2026
ಚಿತ್ರದುರ್ಗ: ಮಹಿಳೆಯರು ಆರ್ಥಿಕವಾಗಿ ಸ್ವಾವಲಂಭಿಗಳಾದಾಗ ಮಾತ್ರ ಜೀವನದಲ್ಲಿ ಎದುರಾಗುವ ಸಮಸ್ಯೆ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಬಹುದು ಎಂದು ಬಿ.ಸಿ.ಎಂ.ಇಲಾಖೆ ಅಧಿಕಾರಿ ಪುಷ್ಪಲತ ಭವಿಮಠ ಕರೆ ನೀಡಿದರು.
ಇದನ್ನೂ ಓದಿ: ಅಡಿಕೆ ಧಾರಣೆ | 17 ಮಾರ್ಚ್ | ಯಾವ ಅಡಿಕೆಗೆ ಎಷ್ಟು ರೇಟ್
ಸರಸ್ವತಿ ಕಾನೂನು ಕಾಲೇಜು, ಮಹಿಳಾ ಸಬಲೀಕರಣ ಕೋಶ, ಐಕ್ಯುಎಸಿ. ವತಿಯಿಂದ ಕಾಲೇಜಿನ ಡೈಮಂಡ್ ಜ್ಯುಬಿಲಿ ಆಡಿಟೋರಿಯಂನಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಕುಟುಂಬ ನಿರ್ವಹಣೆ ಜೊತೆ ಮಹಿಳೆ ಹೊರಗಡೆಯೂ ದುಡಿಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ. 21 ನೇ ಶತಮಾನದಲ್ಲಿ ಮಹಿಳೆ ಎಲ್ಲಾ ರಂಗದಲ್ಲಿಯೂ ಪುರುಷರಿಗೆ ಸರಿಸಮಾನಳಾಗಿದ್ದಾಳೆ. ಮಹಿಳೆ ಅಡುಗೆ ಮನೆಗೆ ಮಾತ್ರ ಸೀಮಿತ ಎನ್ನುವ ಕೀಳರಿಮೆ ಬೇಡ. ಆರ್ಥಿಕ ಸಂಕಷ್ಟಗಳನ್ನು ಎದುರಿಸಿ ಯಶಸ್ಸು ಸಾಧಿಸಿರುವ ಅನೇಕ ವಿದ್ಯಾರ್ಥಿಗಳು ಕಣ್ಣ ಮುಂದಿದ್ದಾರೆಂದು ಹೇಳಿದರು.
ಸರಸ್ವತಿ ಕಾನೂನು ಕಾಲೇಜು ಪ್ರಾಂಶುಪಾಲರಾದ ಡಾ.ಎಂ.ಎಸ್.ಸುಧಾದೇವಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಸದೃಡ ಸಮಾಜ ನಿರ್ಮಾಣವಾಗಬೇಕಾದರೆ ಮಹಿಳೆಯರ ಪಾತ್ರವು ಮುಖ್ಯ. ಇತ್ತೀಚಿನ ದಿನಗಳಲ್ಲಿ ಎಲ್ಲಾ ರಂಗಗಳಲ್ಲಿಯೂ ಮಹಿಳೆ ಮುಂಚೂಣಿಯಲ್ಲಿದ್ದಾಳೆ. ಪುರುಷ-ಮಹಿಳೆ ಎನ್ನುವ ವ್ಯತ್ಯಾಸ ಸರಿಯಲ್ಲ. ಇಬ್ಬರು ಸಮಾನರು ಎಂದರು.
ಇದನ್ನೂ ಓದಿ: ಕೂನಬೇವು ಗ್ರಾಮದಲ್ಲಿ ಬಯೋಡೈಜೆಸ್ಟರ್ ಕಾರ್ಯಾಗಾರ
ಐಕ್ಯುಎಸಿ. ಸಂಯೋಜಕರು ಹಾಗೂ ಸಹಾಯಕ ಪ್ರಾಧ್ಯಾಪಕರಾದ ಡಾ.ಎನ್.ಡಿ.ಗೌಡ, ಸಹಾಯಕ ಪ್ರಾಧ್ಯಾಪಕಿ ಹರ್ಷ ಎಸ್.ಎಂ. ಉಪಸ್ಥಿತರಿದ್ದರು.
ಕಾನೂನು ವಿದ್ಯಾರ್ಥಿನಿ ಮಾನಸ ಮತ್ತು ತಂಡದವರು ಪ್ರಾರ್ಥಿಸಿದರು. ಮೇಘನಾ ಬಿ.ಸಿ. ಸ್ವಾಗತಿಸಿದರು. ಮಾನಸ ಬಿ.ಎಂ.ವಂದಿಸಿದರು. ಸಹಾಯಕ ಪ್ರಾಧ್ಯಾಪಕಿ ಅಭಿನೇತ್ರಿ ಪಟವರ್ಧನ್ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಪಿ.ಸಿ.ಮುರುಗೇಶ್ ಪ್ರತಿಜ್ಞಾ ವಿಧಿ ಬೋಧಿಸಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

