
CHITRADURGA NEWS | 12 MARCH 2026
ಚಿತ್ರದುರ್ಗ: ಮಹಿಳೆಯರನ್ನು ಮಾತೃತ್ವದ ನೆಲೆಯಲ್ಲಿ ಪೂಜನೀಯರೆಂದು ಗೌರವಿಸುವುದರ ಜೊತೆಗೆ ಹಾಗೂ ಕ್ರೀಡೆ ಮತ್ತು ಸಂಶೋಧನೆಯಂತಹ ಕ್ಷೇತ್ರಗಳಲ್ಲಿ ಅವರನ್ನು ಪ್ರೋತ್ಸಾಹಿಸಬೇಕು ಎಂದು ಸರ್ಕಾರಿ ಮೆಡಿಕಲ್ ಕಾಲೇಜು ಶರೀರಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಪಿ.ಎಂ.ವೇಣು ತಿಳಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮಾರ್ಚ್ 12 | ಹತ್ತಿ ರೇಟ್ ಎಷ್ಟಿದೆ?
ನಗರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದರು.
ವಿಜ್ಞಾನ, ವೈದ್ಯಕೀಯ ಮತ್ತು ದೇಶದ ವಾಯುಪಡೆಯಲ್ಲಿ ಮಹಿಳೆಯರ ಸಾಧನೆಯನ್ನು ಗುರುತಿಸುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಮಹಿಳಾ ದಿನಾಚರಣೆ ನಾಮಕಾವಸ್ಥೆಯಲ್ಲ, ಅದು ಅತ್ಯಂತ ಮಹತ್ವಪೂರ್ಣವಾದದ್ದು ಎಂದು ಅಭಿಪ್ರಾಯಪಟ್ಟರು.
ವೈದ್ಯಕೀಯ ಕಾಲೇಜಿನ ಡೀನ್ ಮತ್ತು ನಿರ್ದೇಶ ಡಾ. ಬಿ.ವೈ.ಯುವರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಶೋಧನೆ ವಿಭಾಗದ ರಿಜಿಸ್ಟ್ರಾರ್ ಡಾ. ಮೇಘಾ ಜಿ.ಹೆಚ್, ಶರೀರಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಜಿ. ಸಚ್ಚಿದಾನಂದ ಮತ್ತು ಅಧಿಕಾರಿಗಳು ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ಎಲ್ಲಾ ವೈದ್ಯಕೀಯ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಇದನ್ನೂ ಓದಿ: ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ | ಅರ್ಜಿ ಅಹ್ವಾನ
ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಮೆಡಿಕಲ್ ಕಾಲೇಜು ನಿರ್ದೇಶಕರು ಹಾಗೂ ಬೋಧಕ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿನಿಯರು ಮತ್ತು ಮಹಿಳಾ ಸಿಬ್ಬಂದಿಗಳಿಗೆ ಗುಲಾಬಿ ಹೂಗಳನ್ನು ನೀಡಿ ಶುಭಾಶಯ ಕೋರಿದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
