CHITRADURGA NEWS | 08 FEBRUARY 2026
ಚಿತ್ರದುರ್ಗ: ಚಿತ್ರದುರ್ಗ ರುಡ್ ಸೆಟ್ ಸಂಸ್ಥೆ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವ ಜನತೆಗೆ ಸ್ವ ಉದ್ಯೋಗ ಮಾಡಲು ಮಹಿಳೆಯರ ಟೈಲರಿಂಗ್ ತರಬೇತಿ ನೀಡಲಾಗುವುದು. ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಫೆ.09 ಮತ್ತು 10ರಂದು ಕೋಳಿ ಸಾಕಾಣಿಕೆ ತರಬೇತಿ
ತರಬೇತಿಯ ಅವಧಿ 31 ದಿನಗಳಾಗಿದ್ದು, ತರಬೇತಿಯು ಇದೇ ಫೆ.10 ರಿಂದ ಪ್ರಾರಂಭವಾಗದ್ದು, ಊಟ ಮತ್ತು ವಸತಿ ಸಹಿತವಾಗಿ ಸಂಪೂರ್ಣ ಉಚಿತವಾಗಿರುತ್ತದೆ. 19 ರಿಂದ 45 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕನ್ನಡ ಓದಲು ಬರೆಯುವ ಜ್ಞಾನ ಹೊಂದಿರಬೇಕು. ತರಬೇತಿಗೆ ಸಂಬಂಧಿಸಿದಂತೆ ಪ್ರಾಥಮಿಕ ಜ್ಞಾನ ಹೊಂದಿದ್ದು, ಉದ್ಯೋಗ ಮಾಡಬೇಕೆಂಬ ಆಸಕ್ತಿ ಹೊಂದಿರಬೇಕು.
ಆಸಕ್ತರು ತಮ್ಮ ತಮ್ಮ ಮೊಬೈಲ್ ನಂಬರ್‍ವುಳ್ಳ ಸ್ವವಿಳಾಸದ ಅರ್ಜಿಯೊಂದಿಗೆ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್ ಪ್ರತಿಗಳೊಂದಿಗೆ ಇದೇ ಫೆ.10ರಂದು ಚಿತ್ರದುರ್ಗ ರುಡ್‍ಸೆಟ್ ಸಂಸ್ಥೆಯಲ್ಲಿ ನೇರವಾಗಿ ತರಬೇತಿಯಲ್ಲಿ ಭಾಗವಹಿಸಬಹುದು.
ಇದನ್ನೂ ಓದು: ವಿದ್ಯಾರ್ಥಿಗಳ ಆತ್ಮವಿಶ್ವಾಸ ವೃದ್ಧಿಗೆ ಪೂರ್ವ ಸಿದ್ಧತಾ ಪರೀಕ್ಷೆಗಳು ಸಹಕಾರಿ | ಎಸ್.ಬಸವರಾಜು
ಹೆಚ್ಚಿನ ಮಾಹಿತಿಗಾಗಿ ಮೊ.861828445, 8660627785 ಅನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ರುಡ್‍ಸೆಟ್ ಸಂಸ್ಥೆ ನಿರ್ದೇಶಕರು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
