
CHITRADURGA NEWS | 17 DECEMBER 2025
ಚಿತ್ರದುರ್ಗ: ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಡಿ ಜಿಲ್ಲೆಯಾದ್ಯಂತ ಇದೇ ಡಿ.21 ರಿಂದ 24 ರವರೆಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ಸಿಗೆ ಜಿಲ್ಲೆಯ ನಾಗರಿಕರು, ಸಂಘ-ಸಂಸ್ಥೆಗಳು, ವಿವಿಧ ಇಲಾಖೆಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮೆಕ್ಕೆಜೋಳ ಖರೀದಿ ಕೇಂದ್ರ ಸ್ಥಾಪನೆ
ನೆರೆಯ ದೇಶಗಳಾದ ಪಾಕಿಸ್ತಾನ, ಅಪ್ಘಾನಿಸ್ತಾನದಲ್ಲಿ ಪೋಲಿಯೋ ಪ್ರಕರಣಗಳು ವರದಿಯಾದ್ದರಿಂದ ಅದರ ಪುನರ್ ಆಗಮನ ತಡೆಯಲು, ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಾಪಾಡುವುದು, ಪೋಲಿಯೋದಿಂದ ಮಕ್ಕಳನ್ನು ರಕ್ಷಿಸುವ ಉದ್ದೇಶದಿಂದ ದೇಶಾದ್ಯಂತ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದೆ.
ಪ್ರಯುಕ್ತ ಜಿಲ್ಲೆಯಾದ್ಯಂತ ಇದೇ ಡಿ.21 ರಿಂದ 24 ರವರೆಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಹಿಂದೆ ಎಷ್ಟೇ ಬಾರಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿದ್ದರೂ ಸಹ, ಬರುವ ಭಾನುವಾರ ಡಿ.21ರಂದು ಬೂತ್ ದಿನದಂದು ಐದು ವರ್ಷದ ಒಳಗಿನ ಎಲ್ಲಾ ಮಕ್ಕಳಿಗೂ ತಪ್ಪದೇ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸಬೇಕು ಎಂದರು.
ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ಕೆ ಜಿಲ್ಲೆಯಲ್ಲಿ 1169 ಬೂತ್ ತಂಡಗಳನ್ನು ರಚಿಸಲಾಗಿದ್ದು, 1,26,361 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಉದ್ದೇಶ ಹೊಂದಲಾಗಿದೆ. ಪ್ರಯುಕ್ತ ಎಲ್ಲಾ ನಾಗರಿಕರು, ಸಂಘ-ಸಂಸ್ಥೆಗಳು, ಮಾಧ್ಯಮ ಮಿತ್ರರು, ವಿವಿಧ ಇಲಾಖೆಗಳು ಸಹಕರಿಸಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 17 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
ದೇಶಾದ್ಯಂತ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯುತ್ತಿದ್ದು, ಐದು ವರ್ಷದೊಳಗಿನ ಎಲ್ಲಾ ಮಕ್ಕಳನ್ನು ಇದೇ ಭಾನುವಾರ 21ರಂದು ಸಮೀಪದ ಪೋಲಿಯೋ ಬೂತ್‍ಗಳಿಗೆ ಕರೆದುಕೊಂಡು ಹೋಗಿ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸುವ ಮುಖಾಂತರ ಮಕ್ಕಳ ಆರೋಗ್ಯ ಅಭಿವೃದ್ಧಿಗೆ ಸರ್ವರೂ ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಕೋರಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
