CHITRADURGA NEWS | 18 NOVEMBER 2025
ಚಿತ್ರದುರ್ಗ: ಕನ್ನಡ ರಾಜ್ಯೋತ್ಸವ ನವೆಂಬರ್ ತಿಂಗಳಿಗಷ್ಟೆ ಸೀಮಿತವಾಗಬಾರದು. ಜೀವನದ ಪ್ರತಿ ಕ್ಷಣದಲ್ಲಿಯೂ ಕನ್ನಡ ನಾಡು, ನುಡಿ, ನೆಲ, ಜಲದ ಬಗ್ಗೆ ಮಕ್ಕಳಲ್ಲಿ ಅಭಿಮಾನ ಮೂಡಿಸುವ ಕೆಲಸವಾಗಬೇಕೆಂದು ಡಾ.ಯಶಸ್ವಿನಿ ರೆಡ್ಡಿ ಕೆ.ಬಿ. ತಿಳಿಸಿದರು.
ಇದನ್ನೂ ಓದಿ: ಜೆಸಿಆರ್ ಬಡಾವಣೆಯಲ್ಲಿ ವಿದ್ಯುತ್ ಟ್ರಾನ್ಸ್‌ಫರ್ಮರ್‌ಗೆ ಬೆಂಕಿ
ರಾಷ್ಟ್ರೀಯ ಹೆದ್ದಾರಿ-13 ಪಿಳ್ಳೆಕೆರನಹಳ್ಳಿಯಲ್ಲಿರುವ ಬಾಪೂಜಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಏರ್ಪಡಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕನ್ನಡ ಕಲರವ ಉದ್ಗಾಟಿಸಿ ಮಾತನಾಡಿದರು.
ಶಾಲೆಯಲ್ಲಿ ಮಕ್ಕಳು ಹಾಗೂ ಶಿಕ್ಷಕರ ಒಡನಾಟ ಅನ್ಯೋನ್ಯವಾಗಿರಬೇಕು. ಮಕ್ಕಳನ್ನು ಪಠ್ಯಕ್ಕಷ್ಟೆ ಸೀಮಿತಗೊಳಿಸುವ ಬದಲು ಇಂತಹ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ತೊಡಗಿಸುವ ಜವಾಬ್ದಾರಿ ಶಿಕ್ಷಕರು ಹಾಗೂ ಪೋಷಕರುಗಳ ಮೇಲಿದೆ ಎಂದು ಹೇಳಿದರು.
ಮಕ್ಕಳ ಸಾಹಿತಿ ಪರಮೇಶ್ವರಪ್ಪ ಕುದುರಿ ಮಾತನಾಡಿ ಮಕ್ಕಳ ದಿನಾಚರಣೆ ಹಾಗೂ ಕನ್ನಡ ರಾಜ್ಯೋತ್ಸವದ ಮಹತ್ವ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿದರು.
ಬಾಪೂಜಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಕೆ.ಎಂ.ವೀರೇಶ್ ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಸಾಹಿತ್ಯ ಅತ್ಯಂತ ಪ್ರಮುಖವಾದುದು ಎಂದರು.
ಇದನ್ನೂ ಓದಿ: ನ.26ಕ್ಕೆ ಮುರುಘಾ ಶರಣರ ತೀರ್ಪು !
ಸಂಸ್ಥೆಯ ನಿರ್ದೇಶಕ ಕೆ.ಎಂ.ಚೇತನ್ ಮಾತನಾಡುತ್ತ ಮಕ್ಕಳಲ್ಲಿ ಸಮಯ ಪ್ರಜ್ಞೆ ಹಾಗೂ ಕಲಿಕೆಯಲ್ಲಿ ಸಾಧಿಸುವ ಛಲವಿರಬೇಕು. ಕನ್ನಡ ನಾಡು ನುಡಿ ನೆಲ ಜಲ ಭಾಷೆಯ ಬಗ್ಗೆ ಕನ್ನಡ ರಾಜ್ಯೋತ್ಸವದ ಮೂಲಕ ಪರಿಚಯಿಸಬೇಕೆಂದು ತಿಳಿಸಿದರು.
ಬಾಪೂಜಿ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಮೇಘನಾ ಚೇತನ್, ಎಲ್ಲಾ ಮುಖ್ಯಸ್ಥರು, ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಮಕ್ಕಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಿತು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
