ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಯಾಗಿ ಕೆಲಸ ಮಾಡ್ತಿನಿ | ಸಂಸದ ಗೋವಿಂದ ಎಂ.ಕಾರಜೋಳ

ಸಂಸದ ಗೋವಿಂದ ಎಂ.ಕಾರಜೋಳ

CHITRADURGA NEWS | 17 JUNE 2024
ಚಿತ್ರದುರ್ಗ:‌ ಚಿತ್ರದುರ್ಗದ ನೆಲದಲ್ಲಿ ನರೇಂದ್ರ ಮೋದಿ ಅವರ ಪ್ರತಿನಿಧಿಯಾಗಿ ಕೆಲಸ ಮಾಡುತ್ತೇನೆ ಎಂದು ಸಂಸದ ಗೋವಿಂದ ಎಂ.ಕಾರಜೋಳ ತಿಳಿಸಿದರು.

‘ಲೋಕಸಭೆ ಚುನಾವಣೆಗೆ ಕೇವಲ 15ರಿಂದ 20 ದಿನಗಳ ಮುನ್ನ ಬಿಜೆಪಿ–ಜೆಡಿಎಸ್‌ ಮೈತ್ರಿಕೂಟ (ಎನ್‌ಡಿಎ) ಅಭ್ಯರ್ಥಿಯಾಗಿ ಗಂಡುಮೆಟ್ಟಿದ ನಾಡಿಗೆ ಆಗಮಿಸಿದೆ. ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಉರಿ ಬಿಸಿಲಿನಲ್ಲಿ ಊರು, ಕೇರಿ ಸುತ್ತಿ ಜನರ ಮನವೊಲಿಸಿದರು. ಈ ಎಲ್ಲರ ಸತತ ಪರಿಶ್ರಮ ಗೆಲುವಿಗೆ ಕಾರಣ. ಜನರು ಸಹ ತುಂಬು ಹೃದಯದಿಂದ ಆಯ್ಕೆ ಮಾಡಿದ್ದಾರೆ. ಇವರ ಋಣ ತೀರಿಸುವ ಕೆಲಸ ಮಾಡುತ್ತೇನೆ’ ಎಂದು ಸೋಮವಾರ ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಹೇಳಿದರು.

ಕ್ಲಿಕ್ ಮಾಡಿ ಓದಿ: ರೇಣುಕಸ್ವಾಮಿ ಮನೆಗೆ ಗೃಹ ಸಚಿವರ ಬಾಲ ಹಿಡಿದು ಬರ್ತಾರಾ | ಡಿ.ಸುಧಾಕರ್‌ ವಿರುದ್ಧ ಸಂಸದ ಗೋವಿಂದ ಎಂ.ಕಾರಜೋಳ ವಾಗ್ದಾಳಿ

‘ಕೇಂದ್ರ ಸರ್ಕಾರದ ಯಾವುದೇ ಯೋಜನೆ, ಅಭಿವೃದ್ಧಿ ಇಲಾಖೆಯ ಕೆಲಸ ಕಾರ್ಯಗಳನ್ನು ಎರಡು ಪಕ್ಷಗಳ ಮುಖಂಡರ ಸಲಹೆ, ಸಹಕಾರ ಪಡೆದು ಮಾಡುತ್ತೇನೆ. ಕೇಂದ್ರದ ಸಚಿವರಾಗಿರುವ ಎಚ್‌.ಡಿ.ಕುಮಾರಸ್ವಾಮಿ ಅವರ ಸಂಪುಟದಲ್ಲೂ ಹಿಂದೆ ಕೆಲಸ ಮಾಡಿದ್ದೇನೆ. ಗೆಳೆಯರಾದ ವಿ.ಸೋಮಣ್ಣ ಅವರು ಪ್ರಮುಖ ಖಾತೆಯಲ್ಲಿದ್ದಾರೆ. ಅವರ ಸಲಹೆ, ಸಹಕಾರದಿಂದ ದುರ್ಗದ ಅಭಿವೃದ್ಧಿ ಮಾಡುತ್ತೇನೆ’ ಎಂದು ಭರವಸೆ ನೀಡಿದರು.

‘ಬೃಹತ್ ಕೈಗಾರಿಕೆ ತರಲು ನೀರು, ಭೂಮಿ, ಕಚ್ಚಾ ವಸ್ತುಗಳು ಬೇಕು. ಈ‌ ನಿಟ್ಟಿನಲ್ಲಿ ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಪಾವಗಡ, ಮೊಳಕಾಲ್ಮೂರು‌ ಭಾಗದಲ್ಲಿ ಅತೀ ಹೆಚ್ಚು ಗುಳೆ ಹೋಗುತ್ತಾರೆ. ಇದನ್ನು ಸೋಮಣ್ಣ ಅವರ ಬಳಿ ಚರ್ಚೆ ಮಾಡುತ್ತೇನೆ. ನೀರಾವರಿ, ರೈಲ್ವೆ ಯೋಜನೆ ಮೊದಲ ಆದ್ಯತೆಯಾಗಿದೆ’ ಎಂದರು.

ಕ್ಲಿಕ್ ಮಾಡಿ ಓದಿ: ಗ್ಯಾರೆಂಟಿಗೆ ಹಣ ಹೊಂದಿಸಲು ಸರ್ಕಸ್ | ಸಂಸದ ಗೋವಿಂದ ಎಂ.ಕಾರಜೋಳ

ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿ, ಜೆಡಿಎಸ್‌ ಜಿಲ್ಲಾಧ್ಯಕ್ಷ ಎಂ.ಜಯ್ಯಣ್ಣ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್, ಮಾಜಿ ಶಾಸಕರಾದ ಎಸ್.ಕೆ.ಬಸವರಾಜನ್, ಗೋಪಾಲಸ್ವಾಮಿ ನಾಯಕ, ಎಸ್.ಆರ್.ಗಿರೀಶ್, ಚಿದಾನಂದ್, ವೆಂಕಟೇಶ್ ಯಾದವ್, ಕಲ್ಲೇಶಯ್ಯ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version