
CHITRADURGA NEWS | 09 JANUARY 2026
ಚಿತ್ರದುರ್ಗ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಇದೇ ಜ.10ರಂದು ಬೆಳಿಗ್ಗೆ 10ಕ್ಕೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ “ಡಿಎಲ್‍ಎಸ್‍ಎ ಅಧ್ಯಕ್ಷರು ಮತ್ತು ಸದಸ್ಯ ಕಾರ್ಯದರ್ಶಿಗಳಿಗೆ ಒಂದು ದಿನದ ಕಾರ್ಯಾಗಾರ” ಆಯೋಜಿಸಲಾಗಿದೆ.
ಇದನ್ನೂ ಓದಿ: ಕೃಷಿ ಹೊಂಡ ತೋಡಿಸಲು ರೈತರಿಂದ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರು ಹಾಗೂ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಅನು ಶಿವರಾಮನ್ ಉದ್ಘಾಟನೆ ನೆರವೇರಿಸುವರು. ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಂ.ಜಿ.ಉಮಾ, ಚಿತ್ರದುರ್ಗ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರು ಹಾಗೂ ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಶಾನಂದ, ಹೈಕೋರ್ಟ್ ನ್ಯಾಯಮೂರ್ತಿ ಟಿ.ವೆಂಕಟೇಶ್ ನಾಯ್ಕ್ ಉಪಸ್ಥಿತವಹಿಸುವರು.
ಬೆಳಿಗ್ಗೆ 10 ರಿಂದ 11 ರವರೆಗೆ ಹೈಕೋರ್ಟ್ ನ್ಯಾಯಮೂರ್ತಿ ಅನುಶಿವರಾಮನ್ ಅವರು “ಅಂತರಗಳನ್ನು ನಿವಾರಿಸುವುದು ಮತ್ತು ಡಿಎಲ್‍ಎಸ್‍ಎ ಗಳ ದಕ್ಷತೆ ಹೆಚ್ಚಿಸುವುದು” ಎಂಬ ವಿಷಯದ ಕುರಿತು ಮಾತನಾಡುವರು.
ಬೆಳಿಗ್ಗೆ 11.15 ರಿಂದ ಮಧ್ಯಾಹ್ನ 12.30 ರವರೆಗೆ ಹೈಕೋರ್ಟ್ ನ್ಯಾಯಮೂರ್ತಿ ಎಂ.ಜಿ.ಉಮಾ ಅವರು “ ಲೆಕ್ಕಪತ್ರ ನಿರ್ವಹಣೆ ಮತ್ತು ಕಾನೂನು ಸೇವೆಗಳ ಚಟುವಟಿಕೆಗಳು” ಎಂಬ ವಿಷಯದ ಕುರಿತು ಮಾತನಾಡುವರು.
ಇದನ್ನೂ ಓದಿ: ಮದುವೆ ಮಾಡಲಿಲ್ಲವೆಂದು ತಂದೆಯನ್ನೇ ಕೊಂದ ಮಗ
ಮಧ್ಯಾಹ್ನ 12.30 ರಿಂದ 1.45 ರವರೆಗೆ ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರು “ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಪಾತ್ರಗಳ ಮತ್ತು ಜವಾಬ್ದಾರಿಗಳು” ಎಂಬ ವಿಷಯದ ಕುರಿತು ಮಾತನಾಡಿದರು.
ಮಧ್ಯಾಹ್ನ 1.45 ರಿಂದ 2 ರವರೆಗೆ ಹೈಕೋರ್ಟ್ ನ್ಯಾಯಮೂರ್ತಿ ಟಿ.ವೆಂಕಟೇಶ್ ನಾಯ್ಕ್ ಅವರು “ಡಿಎಲ್‍ಎಸ್‍ಎಗಳಿಂದ ಸರ್ಕಾರಿ ಇಲಾಖೆಗಳೊಂದಿಗೆ ಸಹಯೋಗ ಮತ್ತು ಸಮನ್ವಯ” ಎಂಬ ವಿಷಯದ ಕುರಿತು ಮಾತನಾಡುವರು. ಮಧ್ಯಾಹ್ನ 2 ರಿಂದ 2.15 ರವರೆಗೆ ಚರ್ಚೆ, ಸಂವಾದ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
