
CHITRADURGA NEWS | 12 JANUARY 2026
ಚಿತ್ರದುರ್ಗ: ಚಟುವಟಿಕೆಯಾಧಾರಿತ ಬೋಧನೆಯಿಂದ ಕಲಿಕೆ ಪರಿಣಾಮಕಾರಿಯಾಗುತ್ತದೆ ಎಂದು ಜಿಲ್ಲಾ ಪಂಚಾಯಿತ್ ಸಿಇಓ ಡಾ.ಎಸ್.ಆಕಾಶ್ ಹೇಳಿದರು.
ಇದನ್ನೂ ಓದಿ: ಡೆಸ್ಟಿನಿಯಲ್ಲಿ ಸಾಂಸ್ಕೃತಿಕ ನೃತ್ಯ ಪ್ರದರ್ಶನ | ರಾಜೇಶ್ ಕೃಷ್ಣನ್ ಸಂಗೀತಾ ಮಾಯಾಲೋಕ
ಡಯಟ್‌ನಲ್ಲಿ ಜಿಲ್ಲೆಯ ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ(LKG & UKG)ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಅಂಗನವಾಡಿ ಶಿಕ್ಷಕರಿಗೆ ಹೆಚ್ಚು ಜವಾಬ್ದಾರಿ ಇದ್ದು 6 ತಿಂಗಳಿಂದ 6 ವರ್ಷದವರೆಗಿನ ಮಕ್ಕಳ ಜವಾಬ್ದಾರಿ ನಿರ್ವಹಿಸುತ್ತಾರೆ. ಚಿತ್ರದುರ್ಗದಲ್ಲಿ 137 ಶಾಲೆಗಳಲ್ಲಿ ಎಲ್ ಕೆಜಿ ಮತ್ತು ಯುಕೆಜಿ ತರಗತಿಗಳು ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲಾಗುವುದು.
ಈ ತರಗತಿಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರಿಗೆ ಮಕ್ಕಳಿಗೆ ಕಲಿಸುವುದು ಮೂಲ ಜವಾಬ್ದಾರಿ. ಕಲಿಕೆಗೆ ಆದ್ಯತೆ ನೀಡಬೇಕು. ಸರ್ಕಾರದ ವತಿಯಿಂದ ಚಿಲಿಪಿಲಿ, ಚಿಲಿಪಿಲಿ+ ಪುಸ್ತಕಗಳನ್ನು ಒದಗಿಸಲಾಗಿದೆ. ಈ ಪುಸ್ತಕವನ್ನು ಮತ್ತು ಸೌಲಭ್ಯಗಳನ್ನು ಬಳಕೆ ಮಾಡಿಕೊಂಡು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡಬೇಕು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜನವರಿ 12 | ಮೆಕ್ಕೆಜೋಳ ರೇಟ್ ಎಷ್ಟಿದೆ?
ಚಟುವಟಿಕೆ, ಕಲಿಕೋಪಕರಣಗಳನ್ನು ಬಳಸಿ ಬೋಧಿಸಲು ತರಬೇತಿಗಳು ಅಗತ್ಯ. ಎಪಿಎಫ್(ಅಜೀಂ ಪ್ರೇಮ್‌ಜಿ ಫೌಂಢೇಶನ್) ವತಿಯಿಂದ ಉತ್ತಮವಾದ ತರಬೇತಿ ನೀಡಲಾಗುತ್ತಿದ್ದು, ಶಿಕ್ಷಕರು ಸಂತಸದಾಯಕವಾಗಿ ತರಬೇತಿಯಲ್ಲಿ ಪಾಲ್ಗೊಂಡು ತರಗತಿಯಲ್ಲಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದರು.
ಪ್ರಾಚಾರ್ಯ ಎಂ.ನಾಸಿರುದ್ದೀನ್ ಮಾತನಾಡಿ, ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ಕಾರ್ಯ ನಿರ್ವಹಿಸುವುದು ಸವಾಲಿನ ಕೆಲಸ. ಮನೆಯಲ್ಲಿ ತಾಯಿ ತನ್ನ ಮಕ್ಕಳನ್ನು ಪ್ರೀತಿಯಿಂದ ಸಲಹುವ ರೀತಿಯಲ್ಲಿ ಶಿಕ್ಷಕರು ಮಾತೃ ಸಂವೇದನೆ ಬೆಳೆಸಿಕೊಂಡು ಕಾರ್ಯ ನಿರ್ವಹಿಸಬೇಕು. ಮಗುವಿನ ಬೌಧ್ಧಿಕ, ಮಾನಸಿಕ ಬೆಳವಣಿಗೆಗೆ ಸ್ಫೂರ್ತಿ ನೀಡಬೇಕು ಎಂದರು.
ನೋಡಲ್ ಅಧಿಕಾರಿ ಎಲ್.ರೇವಣ್ಣ ಮಾತನಾಡಿ, ಪೂರ್ವ ಪ್ರಾಥಮಿಕ ಹಂತದಲ್ಲಿ ಶಿಕ್ಷಕರು ಭಾಷೆ ಮತ್ತು ಸಂಖ್ಯಾಜ್ಞಾನದ ಪರಿಕಲ್ಪನೆಗಳನ್ನು ಬೆಳೆಸಬೇಕು. ಇದರಿಂದ ಮಕ್ಕಳು ಮುಂದಿನ ತರಗತಿಯಲ್ಲಿ ಸುಲಭವಾಗಿ ಕಲಿಯಲು ಸಹಾಯವಾಗತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ: ಶ್ರೀ ಅಯ್ಯಪ್ಪಸ್ವಾಮಿ ದೀಪೋತ್ಸವ | ನಗರದಲ್ಲಿ ಆಭರಣಗಳ ಮೆರವಣಿಗೆ | 26ನೇ ವರ್ಷದ ಆಚರಣೆ
ಉಪ ಪ್ರಾಚಾರ್ಯ ಎಸ್. ನಾಗಭೂಷಣ್, ಉಪನ್ಯಾಸಕ ಎಸ್.ಬಸವರಾಜು, ಸಂಪನ್ಮೂಲ ವ್ಯಕ್ತಿಗಳಾದ ಎಪಿಎಫ್‌ನ ಪುನೀತ್. ಸುಮಂಗಳ, ಅನ್ನಪೂರ್ಣ, ಹರೀಶ, ವಿಷಯ ಪರಿವೀಕ್ಷಕ ಕೆ.ಜಿ.ಪ್ರಶಾಂತ್, ಬಿ.ಎಸ್. ನಿತ್ಯಾನಂದ ಮತ್ತು ಎಲ್‌ಕೆಜಿ ಮತ್ತು ಯುಕೆಜಿ ಶಿಕ್ಷಕರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
