CHITRADURGA NEWS | 17 FEBRUARY 2026
ಚಿತ್ರದುರ್ಗ: ಸಮನ್ವಯತೆ ಮತ್ತು ಸಂಘಟನೆಯಿಂದ ಕೆಲಸ ನಿರ್ವಹಿಸಿದಾಗ ಶಾಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳು ಯಶಸ್ವಿಯಾಗಿ ನಡೆಯುತ್ತವೆ ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಫೆಬ್ರವರಿ 16 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆ, ಆಡಳಿತಾತ್ಮಕ ತರಬೇತಿ ಕುರಿತು ಪಿ.ಎಂ.ಶ್ರೀ ಶಾಲೆಗಳ ಮುಖ್ಯ ಶಿಕ್ಷಕರು ಮತ್ತು ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಡಯಟ್‌ನಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು,
ಶಾಲೆಯಲ್ಲಿ ಕೌಟುಂಬಿಕ ವಾತಾವರಣ ನಿರ್ಮಾಣ ಮಾಡಿಕೊಳ್ಳಬೇಕು. ಸಮಯಪ್ರಜ್ಞೆ, ಕ್ರಿಯಾಶೀಲತೆಯಿಂದ ಕೆಲಸ ನಿರ್ವಹಿಸುವ ಮೂಲಕ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ತಿಳಿಸಿದರು.
ಮಕ್ಕಳಿಗೆ ಪ್ರಾರಂಭಿಕ ಹಂತದಿಂದಲೇ ಉತ್ತಮ ಶಿಕ್ಷಣ ನೀಡಿದರೆ ಭವಿಷ್ಯದ ಉನ್ನತ ಶಿಕ್ಷಣವನ್ನು ಸುಲಭವಾಗಿ ಕಲಿಯತ್ತಾರೆ. ಪೂರ್ವ ಪ್ರಾಥಮಿಕ ತರಗತಿಯಲ್ಲಿ ಬೋಧಿಸುವ ಶಿಕ್ಷಕರು ಮಾತೃಭಾವನೆಯಿಂದ ಬೋಧಿಸುವ ಮೂಲಕ ಕಲಿಕೆಯಲ್ಲಿ ಆಸಕ್ತಿ ಮೂಡಿಸಬೇಕು. ಕತೆ, ಹಾಡು, ನೃತ್ಯ, ಚಿತ್ರಗಳ ಬಳಕೆ, ಚಟುವಟಿಕೆಗಳ ಮೂಲಕ ಮೌಲ್ಯಗಳನ್ನು ಬಿತ್ತಬೇಕು. ಇದರಿಂದ ಸತ್ಪçಜೆಗಳನ್ನು ರೂಪಿಸಬಹುದು ಎಂದರು.
ಇದನ್ನೂ ಓದಿ: ಅಡಿಕೆ ಧಾರಣೆ | 16 ಫೆಬ್ರವರಿ | ರಾಶಿ, ಗೊರಬಲು, ಸಿಪ್ಪೆಗೋಟು ಇನ್ನಿತರೆ ಅಡಿಕೆ ರೇಟ್
ನೋಡಲ್ ಅಧಿಕಾರಿ ತಿಪ್ಪೇಸ್ವಾಮಿ, ಎಲ್.ರೇವಣ್ಣ, ಉಪನ್ಯಾಸಕ ಎಸ್.ಬಸವರಾಜು, ಸಂಪನ್ಮೂಲ ವ್ಯಕ್ತಿಗಳಾದ ಪ್ರಸನ್ನಕುಮಾರ್, ಅಜೀಂ ಫ್ರೇಮ್‌ಜಿ ಫೌಂಡೇಶನ್‌ನ ಶೃತಿ, ಶಿವಪ್ರಿಯ, ಮುಖ್ಯ ಶಿಕ್ಷಕ ಮಲ್ಲಿಕಾರ್ಜುನ, ಅಶೋಕ್ ಮತ್ತು ಶಿಕ್ಷಕರು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

