
ಚಿತ್ರದುರ್ಗ ನ್ಯೂಸ್.ಕಾಂ: ಚಳ್ಳಕೆರೆ ತಾಲ್ಲೂಕು ಕುದಾಪುರದ ಭಾರತೀಯ ವಿಜ್ಞಾನ ಸಂಸ್ಥೆ ಹಾಗೂ ಬೆಂಗಳೂರಿನ ಸೊಸೈಟಿ ಫಾರ್ ಇನ್ನೋವೇಷನ್ ಅಂಡ್ ಡೆವಲಪ್ಮೆಂಟ್ ಸಹಯೋಗದಲ್ಲಿ ಡಿಸೆಂಬರ್ 2 ರಂದು ಕುದಾಪುರದಲ್ಲಿ, ನೈಸರ್ಗಿಕ ನಾರುಗಳಾದ ಬಾಳೆ, ಕತ್ತಾಳೆ, ಅಡಿಕೆ ಹಾಗೂ ಕುರಿ ಉಣ್ಣೆಗಳಿಂದ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆ ಹಾಗೂ ಮಾರುಕಟ್ಟೆ ಕುರಿತು ಒಂದು ದಿನ ವಿಚಾರ ಸಂಕೀರ್ಣ ಹಾಗೂ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ.
ಬೆಳಿಗ್ಗೆ 10:30 ಗಂಟೆಗೆ ಸೊಸೈಟಿ ಫಾರ್ ಇನ್ನೋವೇಷನ್ ಅಂಡ್ ಡೆವಲಪ್ಮೆಂಟ್‍ನ ಡಾ.ಅಮಿತವ ಪರ್ಮಾಣಿಕ್ ಕಾರ್ಯಕ್ರಮ ಉದ್ಘಾಟಿಸುವರು. ಭಾರತೀಯ ವಿಜ್ಞಾನ ಸಂಸ್ಥೆಯ ಪ್ರೋ.ಡಿ.ಎನ್.ರಾವ್ ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳುವರು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿದೇಶಕ ಆನಂದ, ಕೃಷಿ ಇಲಾಖೆ ಜಂಟಿ ನಿರ್ದೆಶಕ ಮಂಜುನಾಥ್ ಮುಖ್ಯ ಅತಿಥಿಗಳಾಗಿ ಭಾಗಹಿಸುವರು. ಭಾರತೀಯ ವಿಜ್ಞಾನ ಸಂಸ್ಥೆಯ ಪ್ರೊ.ಬಿ.ಗುರುಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ತೆರೆಮರೆಯ ಕಸರತ್ತು

ಬೆಳಿಗ್ಗೆ 11:30ರಿಂದ ಮಧ್ಯಾಹ್ನ 1:30ರವರೆಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಪಕಿ ಡಾ.ಕೆ.ಜೆ.ಸಣ್ಣಪಾಪಮ್ಮ, ಬಾಳೆ, ಕತ್ತಾಳೆ, ಅಡಿಕೆ ಹಾಗೂ ಕುರಿ ಉಣ್ಣೆಗಳ ಮೌಲ್ಯವರ್ದಿತ ಉತ್ಪನ್ನಗಳ ಮಹತ್ವದ ಮಾಹಿತಿ ನೀಡುವರು. ಮಧ್ಯಾಹ್ನ 2 ರಿಂದ 4 ರವರೆಗೆ ಬೆಳಗಾವಿಯ ಉನ್ನತಿ ಕರಕುಶಲದ ನಿರ್ವಾಹಕ ದಸ್ತಗೀರಸಾಬ್ ಜಮಾದಾರ ನೈಸರ್ಗಿಕ ನಾರುಗಳ ಮೌಲ್ಯವರ್ದಿತ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿರುವ ಬೇಡಿಕೆ ಹಾಗೂ ಮಾರಾಟ ಮಾಡಲು ಇರುವ ವಿವಿಧ ಮಾರ್ಗಗಳ ಮಾಹಿತಿ ನೀಡುವರು.
ರೈತರು, ಸ್ವ ಉದ್ಯೋಗದಲ್ಲಿ ಆಸಕ್ತಿ ಉಳ್ಳವರು, ಕುಶಲಕರ್ಮಿಗಳು ವಿಚಾರ ಸಂಕಿರ್ಣದಲ್ಲಿ ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿ ಹಾಗೂ ನೊಂದಣಿಗಾಗಿ ಗಣೇಶ್ ತೋಳಾರ್ ಮೊಬೈಲ್ ಸಂಖ್ಯೆ 7349695100 ಹಾಗೂ ಕೋಟೇಶ್ ಕೋರವರ ಮೊಬೈಲ್ ಸಂಖ್ಯೆ 9663364234 ಗೆ ಕರೆ ಮಾಡಬಹುದು ಎಂದು ಸೊಸೈಟಿ ಫಾರ್ ಇನ್ನೋವೇಷನ್ ಅಂಡ್ ಡೆವಲಪ್ಮೆಂಟ್ ವ್ಯವಸ್ಥಾಪಕ ನಿರ್ದೇಶಕ ಪ್ರತಾಪ್ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
