CHITRADURGA NEWS | 22 APRIL 2026
ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರ ಹಿತೈಷಿಗಳು ಹಾಗೂ ಅಭಿಮಾನಿ ಬಳಗದಿಂದ ಆಚರಣೆ ಮಾಡುತ್ತಿರುವ ಯಡಿಯೂರಪ್ಪ ಅಭಿಮಾನೋತ್ಸವವು ನಗರದ ಹೊರವಲಯದ ಶ್ರೀ ಮಾದರ ಚೆನ್ನಯ್ಯ ಗುರುಪೀಠ ಪಕ್ಕದಲ್ಲಿರುವ ಆವರಣದಲ್ಲಿ ಮೇ.9 ರಂದು ನಿಶ್ಚಯವಾಗಿದೆ.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
ಇದರ ಅಂಗವಾಗಿ ಮಂಗಳವಾರ ಪೂರ್ವಭಾವಿ ಸಭೆಯನ್ನು ಸರ್ವ ಮುಖಂಡರ ಸಮ್ಮುಖದಲ್ಲಿ ಚಿತ್ರದುರ್ಗ ನಗರದ ಮುರುಘಾಮಠದ ಅಲ್ಲಮಪ್ರಭು ಸಭಾ ಭವನದಲ್ಲಿ ನಡೆಸಲಾಯಿತು.
ಸಂಸದರಾದ ಗೋವಿಂದ ಕಾರಜೋಳ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಮಾಜಿ ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ಎಸ್. ಕೆ.ಬಸವರಾಜನ್, ಖನಿಜ ನಿಗಮ ಮಾಜಿ ಅಧ್ಯಕ್ಷರಾದ ಲಿಂಗಮೂರ್ತಿ, ದಾವಣಗೆರೆ ವಿಭಾಗದ ವಿಭಾಗ ಸಹಾ ಪ್ರಭಾರಿಗಳಾದ ಎ.ಮುರುಳಿ, ಪ್ರಧಾನ ಕಾರ್ಯದರ್ಶಿಗಳಾದ ಡಾ.ಪಿ.ಎಂ.ಮಂಜುನಾಥ, ಜಿ. ಎಚ್.ಮೋಹನ್, ಮಾಧುರಿ ಗಿರೀಶ್, ವೆಂಕಟೇಶ್ ಯಾದವ್, ಬಿಜೆಪಿ ಮುಖಂಡರಾದ ಎನ್.ಆರ್.ಲಕ್ಷ್ಮಿಕಾಂತ್ ಸೇರಿದಂತೆ ಚಿತ್ರದುರ್ಗ ಜಿಲ್ಲೆಯ ಸರ್ವ ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಮತ್ತು ಮಂಡಲಗಳ ವಿವಿಧ ಮೋರ್ಚಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ವಿವಿಧ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
