CHITRADURGA NEWS | 20 JUNE 2025
ಚಿತ್ರದುರ್ಗ: ಮನಸ್ಸು ಮತ್ತು ದೇಹ ಸದೃಢವಾಗಿ ಇರಬೇಕಾದರೆ ಯೋಗ ಸಹಕಾರಿಯಾಗಲಿದೆ ಎಂದು ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಹೇಳಿದರು.
Also Read: ನಿವೃತ್ತ ಕೆಇಬಿ ಇಂಜಿನಿಯರ್ ಟಿ.ಜಿ.ರಾಜಶೇಖರಪ್ಪ ನಿಧನ
ನಗರದ ಮದಕರಿ ಸರ್ಕಲ್ ಬಳಿ ಇರುವ ಪಾರ್ಕ್ ನಲ್ಲಿ ಶ್ರಮಜೀವಿ ಕಟ್ಟಡ ಮತ್ತು ಕೂಲಿ ಕಾರ್ಮಿಕರ ಸೇವಾ ಪಡೆ ಸಂಘಟನೆ ವತಿಯಿಂದ ಆಯೋಜಿಸಿದ್ದ ವಿಶ್ವ ಪರಿಸರ ಹಾಗೂ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು,
ಮನುಷ್ಯನಿಗೆ ಊಟ, ನಿದ್ರೆ, ಯೋಗ ಇವುಗಳು ಎಷ್ಟು ಮುಖ್ಯವೋ ದೇಹದ ಸಮತೋಲನ ಕಾಪಾಡುವುದು ಅಷ್ಟೇ ಮುಖ್ಯ. ಪ್ರತಿಯೊಬ್ಬರೂ ಕ್ರೀಡಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಿ ದೇಹವನ್ನು ಹೊಂದಿಸಿಕೊಳ್ಳಬೇಕು.
ಪರಿಸರ ಮಾನವನ ಜೀವನಕ್ಕೆ ಅತೀ ಮುಖ್ಯ, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿ ಇಟ್ಟುಕೊಳ್ಳಬೇಕು ಎಂದರು.
ಲೇಖಕ ಆನಂದ್ ಕುಮಾರ್ ಮಾತಾಡಿ, ಗಾಳಿ, ಬೆಳಕು, ನೀರು ಮಾನವನ ಕುಲಕ್ಕೆ ಅತೀ ಮುಖ್ಯ, ಇವುಗಳ ಶುದ್ಧೀಕರಣ ನಮ್ಮ ಕೈಯಲ್ಲಿ ಇದೆ. ಮನೆ ಸುತ್ತ-ಮುತ್ತ ಮತ್ತು ಹೊಲಗಳ ಸಸಿಗಳನ್ನು ನೆಡಬೇಕು ಎಂದು ತಿಳಿಸಿದರು.
Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ಈ ಸಂದರ್ಭದಲ್ಲಿ ಮುರುಘಾ ಮಠ ಬಸವಕುಮಾರ್ ಶ್ರೀಗಳು, ಶ್ರಮಜೀವಿ ಕಟ್ಟಡ ಮತ್ತು ಕೂಲಿ ಕಾರ್ಮಿಕರ ಸೇವಾ ಪಡೆ ಸಂಘಟನೆ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್ ಪಾರ್ಥ, ಟಿಪ್ಪು ಸುಲ್ತಾನ್ ಸಂಘಟನೆಯ ರಾಜ್ಯಾಧ್ಯಕ್ಷ ಖಾಸಿಂ ಅಲಿ, ಜಯಣ್ಣ, ನವೀನ್, ಕುಮಾರ್, ರಂಗಸ್ವಾಮಿ ಸೇರಿದಂತೆ ಇತರರು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
