
CHITRADURGA NEWS | 21 JUNE 2024
ಚಿತ್ರದುರ್ಗ: ಯೋಗ ಮಾಡುವುದೆಂದರೆ ಅದು ಬಾಹ್ಯ ಪ್ರದರ್ಶನವಲ್ಲ ಬದಲಿಗೆ ಅಂತರಂಗದ ದರ್ಶನ ನಿಜವಾದ ಯೋಗ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಯೋಗ ಗುರು ವೈದ್ಯಶ್ರೀ ಚೆನ್ನಬಸವಣ್ಣ ಸ್ವಾಮಿಗಳು ಹೇಳಿದರು.
ಇದನ್ನೂ ಓದಿ: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ | ಬಿಜೆಪಿಯಿಂದ ಕಾರಿಗೆ ಹಗ್ಗ ಕಟ್ಟಿ ಪ್ರತಿಭಟನೆ
ಮುರುಘಾ ಮಠದ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನ ಅಂಗವಾಗಿ ಏರ್ಪಡಿಸಿರುವ ಮೂರುದಿನಗಳ ಯೋಗಸಂಭ್ರಮದ 2ನೇ ದಿನವಾದ ಗುರುವಾರ ಯೋಗಪ್ರಾತ್ಯಕ್ಷಿಕೆ ನೀಡಿ ಮಾತನಾಡಿದರು.
ಶ್ವಾಸದ ಮೂಲಕ ದೇಹ ಮತ್ತು ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸಿ ಆರೋಗ್ಯದ ದೇಹ ಮತ್ತು ಮನಸ್ಸನ್ನು ಹೊಂದಲು ಯೋಗ ಸಾಧನೆಯೊಂದೇ ನಿಜಮಾರ್ಗವೆಂದರು.

ನಮ್ಮ ಆಹಾರ ಪದ್ಧತಿಯ ಜೀವನಶೈಲಿಯಲ್ಲಿ ಕ್ರಮಬದ್ಧತೆಯನ್ನು ರೂಢಿಸಿಕೊಂಡರೆ ಅರಿಷಡ್ವರ್ಗ ನಿರ್ವಹಿಸಿಕೊಂಡು ಆ ಮೂಲಕ ಆತ್ಮಸಾಕ್ಷಾತ್ಕಾರ ಪಡೆಯುವುದೆ ನಿಜವಾದ ಯೋಗ ಎಂದು ಪ್ರತಿಪಾದಿಸಿದರು.
ಇದನ್ನೂ ಓದಿ: ಮೊಬೈಲ್ ಗೀಳಿನಿಂದ ಹೊರ ಬನ್ನಿ | ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ
ಯೋಗದಿಂದ ದೇಹಕ್ಕಂಟಿದ ಅನೇಕ ಗಂಭೀರ ಕಾಯಿಲೆಯನ್ನು ಹತೋಟಿಯಲ್ಲಿ ಇಡಬಹುದು. ನಮ್ಮ ದೇಹದ ತಲೆಯೇ ಕಾಶ್ಮೀರ. ಪಾದವೇ ಕನ್ಯಾಕುಮಾರಿ ಎಂದು ಪ್ರತಿಪಾದಿಸಿದ ಅವರು ಈ ಮನಸ್ಸು ನೆಮ್ಮದಿ ಮತ್ತು ಶಾಂತಿಯಿಂದ ಕೂಡಿರಬೇಕಾದರೆ ನಮ್ಮಲ್ಲಿ ನಗುವಿರಬೇಕು. ಮನಸ್ಸು ಬಿಚ್ಚಿ ನಗಬೇಕು. ಚುಚ್ಚಿ ನಗಬಾರದು. ವ್ಯಂಗ್ಯದ ನಗುವು ಆಗಿರಬಾರದು. ಇದು ಅಪಾಯದ ಲಕ್ಷಣ ಎಂದು ಹೇಳಿದರು.

ಆಯುರ್ವೇದ ಪದ್ಧತಿಯನ್ನು ಅನುಸರಿಸಿ ಹಿಂದಿನ ನಮ್ಮ ಪೂರ್ವಿಕರು 100ಕ್ಕಿಂತ ಹೆಚ್ಚುವರ್ಷಗಳ ಕಾಲ ಜೀವಿಸುತ್ತಿದ್ದರು. ಈಗ ಅದು 80, 60, ಮುಂದೆ 30 ಆಗುವ ಲಕ್ಷಣಗಳಿವೆ ಎಂದು ವಿಷಾದ ವ್ಯಕ್ತಪಡಿಸಿದರು.
ಈ ವೇಳೆ ದಾವಣಗೆರೆ ವಿರಕ್ತಮಠದ ಡಾ. ಬಸವಪ್ರಭು ಸ್ವಾಮಿಗಳು ಮಾತನಾಡಿ, ಯೋಗದಿಂದ ದೇಹಕ್ಕೆ ನವಚೈತನ್ಯ ಬರುತ್ತದೆ. ಕೆಲವು ಕಾಯಿಲೆಗಳ ಉಪಶಮನಕ್ಕೆ ಆಯುರ್ವೇದ ಗಿಡಮೂಲಿಕೆಗಳ ಔಷಧಿ ಪರಿಣಾಮಕಾರಿಯಾಗಿದೆ ಎಂದ ಅವರು, ವಿದ್ಯಾರ್ಥಿಗಳಿಗೆ ಯೋಗ ಒಂದು ರೀತಿಯಲ್ಲಿ ಜ್ಞಾನ ಹೆಚ್ಚಿಸುವಲ್ಲಿ ದಿವ್ಯಮಾರ್ಗವಾಗಿದೆ ಎಂದು ಪ್ರತಿಪಾದಿಸಿದರು.
ಇದನ್ನೂ ಓದಿ: ಉದ್ಯೋಗಾಸಕ್ತರಿಗೆ ಸುವರ್ಣಾವಕಾಶ | ವರ್ಷಾ ಅಸೋಸಿಯೇಟ್ಸ್ ಉಚಿತ ತರಬೇತಿ
ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಯೋಗಾಸನ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷರಾದ ಯೋಗಾಚಾರ್ಯ ಎಲ್.ಎಸ್.ಚಿನ್ಮಯಾನಂದ, ಛಲವಾದಿ ಗುರುಪೀಠದ ಶ್ರೀ ಬಸವನಾಗಿದೇವ ಸ್ವಾಮಿಗಳು, ಮೇದಾರಗುರುಪೀಠದ ಶ್ರೀ ಇಮ್ಮಡಿಬಸವ ಕೇತೇಶ್ವರ ಸ್ವಾಮಿಗಳು, ಚಿದರವಳ್ಳಿ-ಶಿರಸಿ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು, ಕುಂಬಾರ ಗುರುಪೀಠದ ಶ್ರೀ ಬಸವಕುಂಬಾರ ಗುಂಡಯ್ಯ ಸ್ವಾಮಿಗಳು ಹಾಗೂ ಲಂಬಾಣ ಗುರುಪೀಠದ ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮಿಗಳು ಇದ್ದರು.
ಈ ಸಂದರ್ಭದಲ್ಲಿ ಶ್ರೀಮಠದ ಅಭಿಮಾನಿಗಳು, ಸಾರ್ವಜನಿಕರು, ಎಸ್.ಜೆ.ಎಂ. ವಿದ್ಯಾಪೀಠದ ಶಾಲಾಕಾಲೇಜುಗಳ ಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
