
CHITRADURGA NEWS | 18 APRIL 2024
ಚಿತ್ರದುರ್ಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಏ.24 ರಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚಿತ್ರದುರ್ಗದಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಬಿಜೆಪಿ ಮುಖಂಡ ಎಂಎಲ್ಸಿ ಎನ್.ರವಿಕುಮಾರ್ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಹಿರೇಗುಂಟನೂರು ದ್ಯಾಮಲಾಂಬ ದೇವಿ ಜಾತ್ರಾ ಮಹೋತ್ಸವ | ಸಿದ್ದತೆ ಪ್ರಾರಂಭ
ಅಂದು ಬೆಳಗ್ಗೆ 11 ಗಂಟೆ ಹೊತ್ತಿಗೆ ನಗರದ ಕನಕ ವೃತ್ತದಿಂದ ಚಳ್ಳಕೆರೆ ಗೇಟ್‍ವರೆಗೆ ಬೃಹತ್ ರೋಡ್ ಶೋ ನಡೆಸುವ ಬಗ್ಗೆ ಬಿಜೆಪಿ ಆಲೋಚನೆ ಮಾಡುತ್ತಿದೆ.
ಸದ್ಯಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚಿತ್ರದುರ್ಗಕ್ಕೆ ಬರುವ ದಿನ ನಿಗಧಿಯಾಗಿದ್ದು, ರೋಡ್ ಶೋ ಎಲ್ಲಿಂದ ಎಲ್ಲಿವರೆಗೆ ನಡೆಯಲಿದೆ ಎನ್ನುವುದು ಇನ್ನಷ್ಟೇ ಅಧಿಕೃತವಾಗಿ ಘೋಷಣೆ ಆಗಬೇಕಿದೆ.
ಇದನ್ನೂ ಓದಿ: ಈ ಚುನಾವಣೆಲಿ ಲೀಡ್ ಕೊಟ್ಟವರಿಗೆ ಸಚಿವ ಸ್ಥಾನ ಪಕ್ಕಾನಾ | ಕೌತುಕ ಮೂಡಿಸಿದ ಎನ್.ವೈ.ಗೋಪಾಲಕೃಷ್ಣ ಹೇಳಿಕೆ
ಕಳೆದ ಲೋಕಸಭೆ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿಯೇ ಚಿತ್ರದುರ್ಗಕ್ಕೆ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದರು. ಆದರೆ, ಈ ಬಾರಿ ಪ್ರಧಾನಿ ಬರುವುದು ಈವರೆಗೆ ನಿಗಧಿಯಾಗಿಲ್ಲ. ಬದಲಾಗಿ, ಯೋಗಿ ಆದಿತ್ಯನಾಥ್ ಬರುತ್ತಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
