CHITRADURGA NEWS | 11 JULY 2026
ಚಿತ್ರದುರ್ಗ: ನಗರದ ರೋಟರಿ ಕ್ಲಬ್ ಆಫ್ ಚಿತ್ರದುರ್ಗದ ನೂತನ ಅಧ್ಯಕ್ಷರಾಗಿರುವ ಇಂಗ್ಲಿಷ್ ಉಪನ್ಯಾಸಕರಾದ ಯೋಗೀಶ್ ಸಹ್ಯಾದ್ರಿ ಅವರು ಜುಲೈ 12 ರಂದು ಬೆಳಗ್ಗೆ 11 ಗಂಟೆಗೆ ನಗರದ ಡಿ.ಸಿ. ಸರ್ಕಲ್ ನಲ್ಲಿ ಇರುವ ಎಸ್.ಆರ್.ಬಿ.ಎಂ.ಎಸ್ ರೋಟರಿ ಬಾಲಭವನದಲ್ಲಿ ರೋಟರಿ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.
ಇದನ್ನೂ ಓದಿ: ತೋಟಗಾರಿಕೆ ಬೆಳೆ | ವಿಮಾ ನೋಂದಣಿ ಪ್ರಕ್ರಿಯೆ ಪ್ರಾರಂಭ
ರೋಟರಿ ಡಿಸ್ಟ್ರಿಕ್ಟ್ ಗೌರ್ನರ್ ಎಲೆಕ್ಟ್ ಪಿ.ಹೆಚ್.ಎಫ್. ಡಾ.ತ್ರಿವಿಕ್ರಮ್ ಜೋಷಿ ಅವರಿಂದ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಯೋಗೀಶ್ ಸಹ್ಯಾದ್ರಿ ಅವರು ಇಂಗ್ಲಿಷ್ ಸಂಪನ್ಮೂಲ ವ್ಯಕ್ತಿಯಾಗಿ, ನಗರದ ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿಯ ಅಧ್ಯಕ್ಷರಾಗಿ, ಮಕ್ಕಳ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು, ಜಿಲ್ಲೆಯ ಹಲವಾರು ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗಾಗಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ.
ಇವರು ಶೈಕ್ಷಣಿಕ ಕಾರ್ಯಗಳ ಜೊತೆ ಜೊತೆಗೆ ಪುಸ್ತಕಗಳನ್ನು ಬರೆಯುವ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಇದೀಗ ರೋಟರಿ ಕ್ಲಬ್ ಆಫ್ ಚಿತ್ರದುರ್ಗದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಇವರ ಜೊತೆಗೆ ವಿದ್ಯಾನಗರದ ಕೆ.ಜಿ.ಮಂಜುನಾಥ್ ರೋಟರಿ ಕ್ಲಬ್ ಆಫ್ ಚಿತ್ರದುರ್ಗ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ.
ಇದನ್ನೂ ಓದಿ: ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ | ಅರ್ಜಿ ಅಹ್ವಾನ
ಈ ಕಾರ್ಯಕ್ರಮದಲ್ಲಿ ರೋಟರಿ ಐಪಿಡಿಜಿ ಎಂ.ಕೆ.ರವೀಂದ್ರ, ಪಿಡಿಜಿ ಪಿ.ಎಸ್.ಶಂಭುಲಿಂಗಪ್ಪ, ಪಿ.ಡಿ.ಜಿ ಕೆ.ಮಧುಪ್ರಸಾದ್, ಹಾಲಿ ಅಧ್ಯಕ್ಷರಾದ ಎ.ಎಂ.ಭಾಗ್ಯ ಲಕ್ಷ್ಮೀ, ಕಾರ್ಯದರ್ಶಿ ಜಿ.ವಿ.ಅನುರಾಧ ಭಾಗವಹಿಸಲಿದ್ದಾರೆ.
ಕ್ಲಬ್ ಬುಲೆಟಿನ್‍ನ್ನು ಪಿ.ಎಚ್.ಎಫ್. ಸವಿತಾ ಶಿವಕುಮಾರ್ ನೆಡೆಸಿಕೊಡಲಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

