
ಚಿತ್ರದುರ್ಗ ನ್ಯೂಸ್.ಕಾಂ: ಗ್ಯಾರೆಂಟಿಗಳ ಕಾರಣಕ್ಕೆ ಕಾಂಗ್ರೆಸ್ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿದೆ. ನಾವೆಲ್ಲಾ ಗ್ಯಾರೆಂಟಿಗಳಿಂದ ಸೋತಿದ್ದೇವೆ. ಆದರೆ, ಲೋಕಸಭೆ ಚುನಾವಣೆ ಹೀಗಾಗಲ್ಲ. ಎಂದು ಬಿಜೆಪಿ ನಾಯಕ ಬಿ.ಶ್ರೀರಾಮುಲು ಹೇಳಿದರು.
ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕರ್ನಾಟಕದಿಂದ ದೊಡ್ಡ ಶಕ್ತಿಯಾಗಿ ಬಿಜೆಪಿ ಹೊರಹೊಮ್ಮಲಿದೆ ಎಂದರು.
ದೇಶದಲ್ಲಿರುವ ವಾತಾವರಣ ನೊಡಿದಾಗ ಬೇರೆ ಚಿತ್ರಣ ಕಾಣಣಿಸುತ್ತದೆ. ಕರ್ನಾಟಕದಲ್ಲಿ ಕೂಡಾ ಈ ಹಿಂದೆ ಗೆದ್ದಿರುವ ಎಲ್ಲ ಸಂಸದರನ್ನು ಮತ್ತೆ ಗೆಲ್ಲಿಸಿಕೊಳ್ಳುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬಿ.ವೈ.ವಿಜಯೇಂದ್ರ ಬಿಜೆಪಿಯ ರೋಹಿತ್ ಶರ್ಮಾ
ಕಾಂಗ್ರೆಸ್ ನಾಯಕರು ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟು ಕುಳಿತಿದ್ದಾರೆ. ವಿಜಯೇಂದ್ರ ಪದಗ್ರಹಣ ಸಂದರ್ಭಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಶಾಸಕರನ್ನು ಕಾಂಗ್ರೆಸ್ಗೆ ಸೆಳೆಯುತ್ತೇವೆ ಎಂದಿದ್ದಾರೆ. ಆದರೆ, ಡಿ.ಕೆ.ಶಿವಕುಮಾರ್ ಹಗಲು ಕನಸು ಕಾಣುತ್ತಿದ್ದಾರೆ.
ಇನ್ನೂ ನಾಲ್ಕೈದು ತಿಂಗಳು ಕಾಯಿರಿ, ಕಾಂಗ್ರೆಸ್ನ ಅಸಲಿ ಬಣ್ಣ ಜನರಿಗೆ ಗೊತ್ತಾಗುತ್ತದೆ. ಅದೇ ವೇಳೆಗೆ ಬಿಜೆಪಿ ಏನು ಎನ್ನುವುದು ಕಾಂಗ್ರೆಸ್ಗೆ ಗೊತ್ತಾಗುತ್ತದೆ ಎಂದು ಮಾರ್ಮಿಕವಾಗಿ ತಿಳಿಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
