
CHITRADURGA NEWS | 10 SEPTEMBER 2025
ಚಿತ್ರದುರ್ಗ: ಮುಂದಿನ ತಿಂಗಳು ಸಿವಿಲ್ ನ್ಯಾಯಾಧೀಶರ ಪರೀಕ್ಷೆ ನಡೆಯಲಿದ್ದು, ನ್ಯಾಯಾಧೀಶರು ಹಾಗೂ ಹಿರಿಯ ವಕೀಲರಿಂದ ಮಾರ್ಗದರ್ಶನ ಪಡೆದು, ಹೆಚ್ಚಿನ ಸಂಖ್ಯೆಯಲ್ಲಿ ಯುವ ನ್ಯಾಯವಾದಿಗಳು ಜಿಲ್ಲೆಯಿಂದ ಆಯ್ಕೆಯಾಗುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ್ ವಾಸುದೇವ್ ಹೇಳಿದರು.
ಇದನ್ನೂ ಓದಿ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ನಗರದ ವಕೀಲರ ಭವನದಲ್ಲಿ ಬುಧವಾರ ಜಿಲ್ಲಾ ವಕೀಲರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಸಿವಿಲ್ ನ್ಯಾಯಾಧೀಶರ ಪರೀಕ್ಷಾರ್ಥಿಗಳಿಗೆ ನ್ಯಾಯಾಧೀಶರುಗಳಿಂದ ಹಾಗೂ ಹಿರಿಯ ವಕೀಲರಿಂದ ತರಬೇತಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಸಿವಿಲ್ ನ್ಯಾಯಾಧೀಶರ ಪರೀಕ್ಷಾರ್ಥಿಗಳು ತರಬೇತಿ ಶಿಬಿರದಲ್ಲಿ ಸಕ್ರಿಯವಾಗಿ ಭಾಗವಹಿಸಿ, ಜ್ಞಾನ ಹೆಚ್ಚಿಸಿಕೊಳ್ಳಬೇಕು. ಪರೀಕ್ಷೆಗೆ ಮಾತ್ರ ತರಬೇತಿ ಅಲ್ಲ. ಇದು ವೃತ್ತಿಗೂ ಸಹಾಯಕವಾಗಲಿದೆ ಎಂದು ತಿಳಿಸಿದ ಅವರು, ಪರೀಕ್ಷಾ ಪದ್ಧತಿಯು ಮೂರು ಹಂತದಲ್ಲಿ ನಡೆಯಲಿದ್ದು, ಕಾನೂನು ವಿಷಯದ ಎಂದು ಹೇಳಿದರು.
ವಕೀಲರ ಸಂಘದ ಅಧ್ಯಕ್ಷ ಹೆಚ್.ಎಸ್.ಮಹೇಶ್ವರಪ್ಪ ಮಾತನಾಡಿ, ಜಿಲ್ಲಾ ವಕೀಲರ ಸಂಘದಲ್ಲಿ ಯುವಕರ ಸಂಖ್ಯೆ ಹೆಚ್ಚಾಗಿದ್ದು, ಸುಮಾರು 70ಕ್ಕೂ ಹೆಚ್ಚು ಯುವ ನ್ಯಾಯವಾದಿಗಳು ಸಿವಿಲ್ ನ್ಯಾಯಾಧೀಶರ ಪರೀಕ್ಷೆ ತೆಗೆದುಕೊಂಡಿದ್ದು, ಪರೀಕ್ಷಾರ್ಥಿಗಳಿಗೆ ಉತ್ತಮ ತರಬೇತಿ ನೀಡುವ ನಿಟ್ಟಿನಲ್ಲಿ ಎಲ್ಲ ರೀತಿಯ ಅಗತ್ಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಮಹೋತ್ಸವದ ಅಂಗವಾಗಿ ನವದುರ್ಗೆಯರ ಅದ್ದೂರಿ ಮೆರವಣಿಗೆ
ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಓ.ಜಗದೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಲಯ ನ್ಯಾಯಾಧೀಶರಾದ ವೀರಣ್ಣ ಸೋಮಶೇಖರ್, ಗಂಗಾಧರ್, ಡಿ.ಮಮತ, ಎ.ಎಂ.ಚೈತ್ರಾ, ಉಜ್ವಲ ವೀರಣ್ಣ ಸಿದ್ದಣ್ಣವರ್,ರಶ್ಮಿ, ಪೂಜಾ, ಲಿಖಿತಾ, ಸಹನಾ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್ ಸೇರಿದಂತೆ ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳು, ವಕೀಲರು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
