
CHITRADURGA NEWS | 08 OCTOBER 2025
ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕು ಕಾಕಬಾಳು ಗ್ರಾಮದ ರಕ್ಷಿತಾ ತಂದೆ ನಾಗರಾಜ್ ಕೆ.ಟಿ. (20) ಕಾಣೆಯಾದ ಕುರಿತು ಅ. 5 ರಂದು ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಪೊಲೀಸ್ ಅಧಿಕಾರಿಗಳ ವರ್ಗಾವಣೆ | ಗ್ರಾಮಾಂತರ ಠಾಣೆಗೆ ಬಾಲಚಂದ್ರ ನಾಯ್ಕ್

ರಕ್ಷಿತಾ ಭರಮಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಬಿ.ಎ. ವಿದ್ಯಾಭ್ಯಾಸ ಮಾಡುತ್ತಿದ್ದು, ತಾಯಿ ದೇವಮ್ಮ ರೊಂದಿಗೆ ರಕ್ಷಿತಾ ಹೊಲಕ್ಕೆ ಹೊಗಿದ್ದು ನಂತರ ಕಾಣೆಯಾಗಿರುತ್ತಾರೆ. ರಕ್ಷಿತಾ ಸುಮಾರು 5 ಅಡಿ ಎತ್ತರ, ಕೊಲುಮುಖ, ಸಾದಾರಣ ಮೈಕಟ್ಟು, ಗೋಧಿ ಮೈಬಣ್ಣವನ್ನು ಹೊಂದಿದ್ದು, ಕಾಣೆಯಾದ ಸಮಯದಲ್ಲಿ ಹಳದಿ ಬಣ್ಣದ ಟಾಪ್, ಕೆಂಪು ಬಣ್ಣದ ಲೆಗಿನ್ ಧರಿಸಿರುತ್ತಾಳೆ.
ಕಾಣೆಯಾದ ಯುವತಿ ಪತ್ತೆಯಾದವಲ್ಲಿ ಭರಮಸಾಗರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 08194258421, 9480803163, ಅಥವಾ ಚಿತ್ರದುರ್ಗ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ 08194222782, 0819410 ಗೆ ಕರೆ ಮಾಡುವಂತೆ ಪ್ರಕಟಣೆ ಕೋರಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
