CHITRADURGA NEWS | 17 SEPTEMBER 2025
ಚಿತ್ರದುರ್ಗ: ನಗರದ ಒನಕೆ ಓಬವ್ವ ವೃತ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದಂದೇ ಯುವ ಕಾಂಗ್ರೆಸ್ ಕಾರ್ಯಕರ್ತರು ಪಕೋಡಾ ಮಾಡಿ ಮಾರಾಟ ಮಾಡುವ ಮೂಲಕ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಡಿ.ಜೆ. ಮಾಲಿಕರ ಮೇಲೆ ಕ್ರಿಮಿನಲ್ ಕೇಸ್ | ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿದ್ದ 6 ಡಿಜೆ, ವಾಹನ ಮಾಲಿಕರ ಮೇಲೆ ಕಾನೂನು ಕ್ರಮ
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕಾರೇಹಳ್ಳಿ ಉಲ್ಲಾಸ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ 2014ರಲ್ಲಿ ಅಧಿಕಾರಕ್ಕೆ ಬರುವಾಗ ದೇಶದ ಯುವಕರಿಗೆ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವ ಭರವಸೆ ನೀಡಿದ್ದರು, ಆದರೆ, ಈವರೆಗೆ ಉದ್ಯೋಗ ನೀಡದೆ ಅನ್ಯಾಯ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನರೇಂದ್ರ ಮೋದಿ ಹೇಳಿದಂತೆ ಪ್ರತಿ ವರ್ಷ 2 ಕೋಟಿ ಅಂದರೇ, 11 ವರ್ಷಕ್ಕೆ 22 ಕೋಟಿ ಉದ್ಯೋಗಗಳು ಸೃಷ್ಟಿಯಾಗಿದ್ದರೇ, ನಮ್ಮ ದೇಶ ಚೀನಾ, ಅಮೆರಿಕಾ ದೇಶಗಳನ್ನು ಮೀರಿ ಅಭಿವೃದ್ಧಿ ಆಗುತ್ತಿತ್ತು, ಆದರೆ, ಈವರೆಗೆ ಸಾಧ್ಯವಾಗಿಲ್ಲ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವನ್ನು ನಿರುದ್ಯೋಗಿಗಳ ದಿನಾಚರಣೆಯಾಗಿ ಆಚರಿಸುತ್ತಿದ್ದೇವೆ ಎಂದರು.
ಕೇಂದ್ರ ಸರ್ಕಾರ ಗಾಢ ನಿದ್ದೆಯಿಂದ ಎದ್ದು ವಿದ್ಯಾವಂತ ಪದವೀದರ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಸೃಷ್ಟಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿ. ಇಲ್ಲವಾದರೇ ಮುಂಬರುವ 2029 ರ ಲೋಕಸಭಾ ಚುನಾವಣೆಯಲ್ಲಿ ಸೋತು ಸ್ವತಃ ಪಕೋಡ ಮಾಡುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಸೆ.18 ರಂದು ಚಿತ್ರದುರ್ಗ-SSS ಹಬ್ಬಳ್ಳಿ ಎಕ್ಸ್‌ಪ್ರೆಸ್ ರೈಲು ರದ್ದು
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಮುಖಂಡರಾದ ಮುದಾಸಿರ್, ಎನ್.ಡಿ.ಕುಮಾರ್, ದಾದಪೀರ್, ವಿನಯ ಪ್ರಸಾದ್, ಪ್ರದೀಪ್ ಗೌಡ, ಪವನ ನಾಯ್ಕ್, ಮಹಾಂತೇಶ್, ವೈಶಾಖ, ಇಂಜಿಮಾವತಿ, ನಿಜಾಮ್, ಮಧು ಶ್ರೀನಿವಾಸ್, ಯಸೀನ ಇತರರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
