ಮುಖ್ಯ ಸುದ್ದಿ
ಯುವನಿಧಿ | ಜ.20ರವರೆಗೆ ವಿಶೇಷ ನೋಂದಣಿ ಅಭಿಯಾನ
CHITRADURGA NEWS | 08 JANUARY 2025
ಚಿತ್ರದುರ್ಗ: ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023 ಮತ್ತು 2024ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನಗಳನ್ನು ಪೂರೈಸಿದ ಅಭ್ಯರ್ಥಿಗಳಿಗೆ ಇದೇ ಜ.20 ರವರೆಗೆ “ಯುವನಿಧಿ” ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಕ್ಲಿಕ್ ಮಾಡಿ ಓದಿ: ಮುಖ್ಯ ರಸ್ತೆ ಅಗಲೀಕರಣ ಫಿಕ್ಸ್ | 15 ದಿನಗಳಲ್ಲಿ ದಾಖಲೆ ಸಂಗ್ರಹಿಸಿ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಡಿಪ್ಲೊಮಾ ಪ್ರಮಾಣ ಪತ್ರ ಸೇರಿದಂತೆ ನೋಂದಣಿಗೆ ಅಗತ್ಯವಿರುವ ದಾಖಲಾತಿಗಳೊಂದಿಗೆ http://sevasindhugs.karnataka.
ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ, ಕಾಲೇಜು, ವಿಶ್ವವಿದ್ಯಾಲಯ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು.
ಕ್ಲಿಕ್ ಮಾಡಿ ಓದಿ: ವಿವಿ ಸಾಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗೀನ ಅರ್ಪಣೆ | ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಸಹಾಯವಾಣಿ ಸಂಖ್ಯೆ 18005997154, ದೂರವಾಣಿ ಸಂಖ್ಯೆ 9945587060 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಡಿ.ರವೀಂದ್ರ ತಿಳಿಸಿದ್ದಾರೆ.