
CHITRADURGA NEWS | 10 NOVEMBER 2025
ಚಿತ್ರದುರ್ಗ: ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಡಿ.ಬಿ.ಟಿ. ಮೂಲಕ ಹಣ ಸಂದಾಯ ಮಾಡಲಾಗುತ್ತಿದ್ದು, ಫಲಾನುಭವಿಗಳಿಗೆ ನಂತರದ ತಿಂಗಳುಗಳ ಯುವನಿಧಿ ಹಣ ಸಂದಾಯವಾಗಲು ಕಡ್ಡಾಯವಾಗಿ ಪ್ರತಿ ತಿಂಗಳ 25ನೇ ತಾರೀಖಿನೊಳಗೆ ಸ್ವಯಂ ದೃಢೀಕರಣ ಮಾಡಿಕೊಳ್ಳಬೇಕಾಗಿರುತ್ತದೆ.
ಇದನ್ನೂ ಓದಿ: ನೀನಾಸಂ ನಾಟಕಗಳು ಮನುಷ್ಯ ಜೀವನದ ಕೈಗನ್ನಡಿಯಾಗಿವೆ | ಶಿವಯೋಗಿ ಸಿ.ಕಳಸದ

ಆದ್ದರಿಂದ ಯುವನಿಧಿ ಯೋಜನೆಯ ಫಲಾನುಭವಿಗಳು ಮೊಬೈಲ್ ಮೂಲಕ ಅಥವಾ ಹತ್ತಿರದ ಚಿತ್ರದುರ್ಗ ಒನ್/ಗ್ರಾಮ ಒನ್ ಸೆಂಟರ್‍ಗಳಲ್ಲಿ ದಿನಾಂಕ:25-11-2025ರೊಳಗೆ ಸ್ವಯಂ ದೃಢೀಕರಣ ಮಾಡಿಕೊಳ್ಳಬೇಕು ಎಂದು ಈ ಮೂಲಕ ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಸ್ಟೇಡಿಯಂ ತಿರುವು, ಹಳೇ ವೈಶಾಲಿ ಗೇಟ್ ಹತ್ತಿರ, ಚಿತ್ರದುರ್ಗ-9945587060, 7019755147 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
