CHITRADURGA NEWS | 03 AUGUST 2026
ಚಿತ್ರದುರ್ಗ: ಚಿತ್ರದುರ್ಗ ನಗರದ ಸಾಧಿಕ್ ನಗರ ಹಾಗೂ ಅಂಬೇಡ್ಕರ್ ನಗರದ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರಿಗೆ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‍ಐಆರ್) ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಿ. ಎಸ್. ಗಾಯತ್ರಿ ಅವರು ಭೇಟಿ ನೀಡಿ ಜಾಗೃತಿ ಮೂಡಿಸಿದರು. ಎಸ್‍ಐಆರ್ ಗಣತಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಆ ನಮೂನೆಯನ್ನು ಬಿ.ಎಲ್.ಒಗಳಿಗೆ ಹಿಂತಿರುಗಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಇದನ್ನೂ ಓದಿ: ಟಿ.ರಘುಮೂರ್ತಿ ಮಿನಿಸ್ಟರ್ | ಹ್ಯಾಟ್ರಿಕ್ ಗೆಲುವಿನ ಸರದಾರನಿಗೆ ಒಲಿದ ಮಂತ್ರಿ ಪಟ್ಟ
ಅಲ್ಲದೆ, ಅರ್ಹ ಮತದಾರರು ಯಾರೂ ಸಹ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು. ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಅವಧಿಯಲ್ಲಿ ನಾಗರಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವುದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ಡಿ.ಎಸ್.ಸುಮಾ, ಸರ್ಕಾರಿ ಪ್ರಥಮ ದರ್ಜೆ ಕಾಳೇಜಿನ ಉಪನ್ಯಾಸಕರು ಮತ್ತು ಎನ್‍ಸಿಸಿ, ಎನ್‍ಎಸ್‍ಎಸ್ ವಿದ್ಯಾರ್ಥಿಗಳು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

