ಮುಖ್ಯ ಸುದ್ದಿ
ಜಿಲ್ಲಾ ಪಂಚಾಯಿತಿ ನೌಕರ ಸಿ.ಎನ್.ನವನೀತ್ ಅಮಾನತು | ಅನಧಿಕೃತ ಗೈರು ಹಾಜರಿ ಹಿನ್ನೆಲೆ ಆದೇಶ
CHITRADURGA NEWS | 25 JUNE 2024
ಚಿತ್ರದುರ್ಗ: ಅನಧಿಕೃತವಾಗಿ ಗೈರು ಹಾಜರಾಗಿದ್ದ ಜಿಲ್ಲಾ ಪಂಚಾಯಿತಿ ನೌಕರರೊಬ್ಬರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಅಭಿವೃದ್ಧಿ ಶಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಿ.ಎನ್.ನವನೀತ್ ಕಳೆದ ಒಂದು ತಿಂಗಳಿಂದ ಅನಧಿಕೃತವಾಗಿ ಗೈರು ಹಾಜರಾಗಿದ್ದರು.
ಇದನ್ನೂ ಓದಿ: ಕನ್ನಡದಲ್ಲಿ ಗೋವಿಂದ ಎಂ.ಕಾರಜೋಳ ಪ್ರಮಾಣ ವಚನ ಸ್ವೀಕಾರ
2024 ಮೇ 24 ರಿಂದ ಈವರೆಗೆ ಯಾವುದೇ ಪೂರ್ವಾನುಮತಿ ಪಡೆಯದೇ, ರಜೆ ಅರ್ಜಿಯನ್ನೂ ಸಲ್ಲಿಸದೆ ಕರ್ತವ್ಯಕ್ಕೆ ಏಕಾಏಕಿ ಗೈರಯ ಹಾಜರಾಗಿದ್ದರು. ಈ ಬಗ್ಗೆ ಕಚೇರಿಯಿಂ ದೂರವಾಣಿ ಮೂಲಕ ಸಂಪರ್ಕಿಸಿದರೂ ಸಂಪರ್ಕಕ್ಕೆ ಸಿಕ್ಕಿರಲಿಲ್ಲ.
ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರು ಸಿ.ಎನ್.ನವನೀತ್ ಅವರಿಗೆ ನೋಟೀಸ್ ಜಾರಿ ಮಾಡಿದ್ದರೂ ಉತ್ತರಿಸದೆ ನಿರ್ಲಕ್ಷ್ಯ ತೋರಿದ್ದಾರೆ.
ಇದನ್ನೂ ಓದಿ: ಎಚ್.ಡಿ.ಪುರದ ಲಕ್ಷ್ಮೀನರಸಿಂಹಸ್ವಾಮಿಗೆ ಹೊಸ ರಥ ನಿರ್ಮಾಣಕ್ಕೆ ನಿರ್ಧಾರ | ಶಿಥಿಲಗೊಂಡಿರುವ 200 ವರ್ಷ ಹಳೆಯ ರಥ
ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಕೆಪಿಎಸ್ ನಿಯಾಮವಳಿ ಪ್ರಕಾರ ದ್ವಿತೀಯ ದರ್ಜೆ ಸಹಾಯಕ ಸಿ,ಎನ್.ನವನೀತ್ ಅವರನ್ನು ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಅಮಾನತು ಅವಧಿಯಲ್ಲಿ ಸದರಿ ಪ್ರಾಧಿಕಾರದ ಅನುಮತಿ ಪಡೆಯದೆ ಕೇಂದ್ರ ಸ್ಥಾನ ಬಿಡುವಂತಿಲ್ಲ ಮತ್ತು ಅನ್ಯ ಉದ್ಯೋಗದಲ್ಲಿ ತೊಡಗುವಂತಿಲ್ಲ. ನಿಯಮಾನುಸಾರ ಜೀವನಾಧಾರ ಭತ್ಯಗೆ ಅರ್ಹರಿರುತ್ತಾರೆ ಎಂದು ಆದೇಶ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.