ಮುಖ್ಯ ಸುದ್ದಿ
ZP ELECTIONS | ಮೂರು ತಿಂಗಳಲ್ಲಿ ಜಿಲ್ಲಾ–ತಾಲೂಕು ಪಂಚಾಯಿತಿ ಚುನಾವಣೆ | ಕೆ.ಎಸ್.ನವೀನ್
CHITRADURGA NEWS | 01 AUGUST 2024
ಚಿತ್ರದುರ್ಗ: ಮೂರು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ದಿನಾಂಕ ನಿಗಧಿಯಾಗುವ ಸಾಧ್ಯತೆಗಳು ಕಾಣಿಸುತ್ತಿವೆ.
ಇತ್ತೀಚೆಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗೆ ಚುನಾವಣೆ ಘೋಷಣೆಯಾಗಲಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರು ಸಜ್ಜಾಗಿರಿ ಎಂಬ ಸಂದೇಶ ನೀಡಿದ್ದರು.
ಇದನ್ನೂ ಓದಿ: SP ಧರ್ಮೇಂದರ್ ಕುಮಾರ್ ಮೀನಾ ವರ್ಗಾವಣೆ | ಸಂಶೋಧನಾ ಸಂಸ್ಥೆಯ ವಿಜ್ಞಾನಿಯಾಗಿ ನೇಮಕ
ಇದರ ಬೆನ್ನಲ್ಲೇ ಚಿತ್ರದುರ್ಗದ ತಿರುಮಲ ಕಲ್ಯಾಣ ಮಂಟಪದಲ್ಲಿ ಜು.31 ರಂದು ಬಿಜೆಪಿ ಆಯೋಜಿಸಿದ್ದ ವಿಶೇಷ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಬಗ್ಗೆ ಚರ್ಚಿಸಲಾಗಿದೆ.
ಕಾರ್ಯಕಾರಿಣಿ ಸಭೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಮುಂದಿನ ಮೂರು ತಿಂಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗೆ ಚುನಾವಣೆ ಎದುರಾಗಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣ | ಸಿಎಂ ರಾಜೀನಾಮೆ ನೀಡದೆ ಭಂಡತನಕ್ಕೆ ಬಿದ್ದಿದ್ದಾರೆ | ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ
ಕಾರ್ಯಕರ್ತರು, ಮುಖಂಡರು ಈ ಚುನಾವಣೆಗೆ ಸಜ್ಜಾಗಿರಬೇಕು ಎಂದು ಕರೆ ನೀಡಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರ ಬಲ ಹೆಚ್ಚಾಗಿದ್ದರೂ, ಇಬ್ಬರು ಮಂತ್ರಿಗಳು ಕ್ಷೇತ್ರ ವ್ಯಾಪ್ತಿಯಲ್ಲಿದ್ದರೂ ನಮ್ಮ ಕಾರ್ಯಕರ್ತರ ಪರಿಶ್ರಮದಿಂದ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಗೋವಿಂದ ಕಾರಜೋಳ ಗೆದ್ದಿದ್ದಾರೆ ಎಂದು ತಿಳಿಸಿದ್ದಾರೆ.
ಕಾರ್ಯಕರ್ತರ ಚುನಾವಣೆ ಎಂದೇ ಹೆಸರಾಗಿರುವ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಅಧಿಕಾರ ಹಿಡಿದರೆ ಮುಂಬರುವ ವಿಧಾನಸಭೆ, ಲೋಕಸಭೆ ಚುನಾವಣೆಗಳಿಗೆ ಅನುಕೂಲ ಎನ್ನುವುದು ರಾಜಕೀಯ ಪಕ್ಷಗಳ ಲೆಕ್ಕಾಚಾರವಾಗಿರುತ್ತದೆ.
ಇದನ್ನೂ ಓದಿ: 8 ದಿನ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ನೋಡಿ
ಸಭೆಯಲ್ಲಿ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಬಿಜೆಪಿ ರಾಜ್ಯ ಕಾರ್ಯದರ್ಶಿ ಮುನಿರಾಜು, ಜಿಲ್ಲಾಧ್ಯಕ್ಷ ಎ.ಮುರುಳಿ, ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಸಿದ್ದಾಪುರ, ಬಾಳೆಕಾಯಿ ರಾಮದಾಸ್, ಸಂಪತ್ ಇತರರಿದ್ದರು.