CHITRADURGA NEWS | 24 JULY 2025
ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಂಗಳವಾರ ಭೇಟಿ ನೀಡಿ, ಜಲಜೀವನ್ ಮಿಷನ್ (ಜೆಜೆಎಂ) ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ವೀಕ್ಷಣೆ ಮಾಡಿದರು.
ಇದನ್ನೂ ಓದಿ: ಜಿಲ್ಲಾ ಪಂಚಾಯಿತಿ ನೂತನ CEO ಆಗಿ ಡಾ.ಆಕಾಶ್ ಅಧಿಕಾರ ಸ್ವೀಕಾರ
ಹುಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲ್ಲೂರು ಗ್ರಾಮದಲ್ಲಿ ಜಲ ಜೀವನ್ ಮಿಷನ್ ಕಾಮಗಾರಿ ಪರಿವೀಕ್ಷಣೆ ನಡೆಸಿ, ಜಲ ಸಂಗ್ರಹಾಗಾರದ ಸುತ್ತಲೂ ತಂತಿಬೇಲಿ ಅಳವಡಿಸಲು ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದರು. ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಹಾಗೂ ಮಕ್ಕಳ ಹಾಜರಾತಿ, ಮಧ್ಯಾಹ್ನದ ಬಿಸಿ ಊಟದ ಬಗ್ಗೆ ಪರಿಶೀಲಿಸಿದರು.
ಬೊಮ್ಮೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡ್ಲೇಗುದ್ದು ಗ್ರಾಮದ ಬಳಿ ಇರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಸಮತೋಲನ ಜಲಸಂಗ್ರಹಗಾರ ZBT-14 ವೀಕ್ಷಣೆ ನಡೆಸಿ, ಡಿ.ಆರ್.ಎಸ್ ಇನ್ಪ್ರಾಸ್ಟ್ರೇಚ್ಚರ್ ಅವರಿಗೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಿದರು.
ಕಡ್ಲೇಗುದ್ದು ಗ್ರಾಮದ ಜಲಜೀವನ್ ಮಿಷನ್ ಕಾಮಗಾರಿ ವೀಕ್ಷಿಸಲಾಗಿ ಯೋಜನೆಯ ನಾಮಫಲಕ ಅಳವಡಿಸಲು ಸೂಚಿಸಲಾಗಿ ಗ್ರಾಮದ ಅನೇಕ ಸ್ಥಳಗಳಿಗೆ ಭೇಟಿ ನೀಡಿದ್ದು, ಗ್ರಾಮದ ಬಹುತೇಕ ಮನೆಗಳು, ಶಾಲೆ ಹಾಗೂ ಅಂಗನವಾಡಿಗಳಲ್ಲಿ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಯು ಉತ್ತಮವಾಗಿರುವುದನ್ನು ಕಂಡು ಮೆಚ್ಚುಗೆ ವ್ಯಕ್ತ ಪಡಿಸಿದರು.
ಇದನ್ನೂ ಓದಿ: ಭಾರತ್ ಎಲೆಕ್ಟ್ರಾನಿಕ್ಸ್ | ಚಾಲಕರ ಹುದ್ದೆಗಳಿಗೆ ಅರ್ಜಿ ಅಹ್ವಾನ
ಕಡ್ಲೇಗುದ್ದು ಗ್ರಾಮದಲ್ಲಿ ದಿನದ 24 ಗಂಟೆಯೂ 24×7 ಕುಡಿಯುವ ನೀರು ಸಾರ್ವಜನಿಕರಿಗೆ ಸಿಗುವಂತೆ ಕೆಲಸ ಕಾರ್ಯಗಳು ಪೂರ್ಣಗೊಂಡಿದ್ದು, ಶಾಸಕರು ಉದ್ಘಾಟನೆ ನೆರವೇರಿಸುವರು ಎಂದು ತಿಳಿಸಿದರು.
ಕೊಳಹಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಸವನಹಳ್ಳಿ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿ ಪರಿವೀಕ್ಷಣೆ ಮಾಡಿ, ಗ್ರಾಮದ ಎಲ್ಲಾ ಕಾಲೋನಿಗಳಿಗೆ ಭೇಟಿ ನೀಡಿ ಕಾಲೋನಿಯಲ್ಲಿ ನಿರ್ವಹಿಸಿರುವ ನಳ ಸಂಪರ್ಕ ಕಾಮಗಾರಿಯ ಗುಣಮಟ್ಟ ಶ್ಲಾಘಿಸಿದರು. ಸಿ.ಸಿ.ರಸ್ತೆ ರೆಸ್ಟೋರೆಷನ್ ಕಾರ್ಯ ವೀಕ್ಷಿಸಿದರು.
ಇದನ್ನೂ ಓದಿ: ವಿದ್ಯುತ್ ತಂತಿ ತಗುಲಿ ಮೂವರು ಸಾವು
ಜಲಜೀವನ್ ಮಿಷನ್ ಯೋಜನೆಯ ಕಾರ್ಯಾತ್ಮಕ ನಳ ಸಂಪರ್ಕದ ಮೂಲಕವೇ ನೀರು ಸರಬರಾಜು ಮಾಡಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮಸ್ಥರು ಇವರುಗಳಿಗೆ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿ ಸದುಪಯೋಗ ಪಡಿಸಿಕೊಳ್ಳಲು ಸಲಹೆ ನೀಡಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

