CHITRADURGA NEWS | 12 July 2025
ಚಿತ್ರದುರ್ಗ: ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತಿಗೆ ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸುವ ಕಾರ್ಯದಲ್ಲಿ ಮುಂದಾಗಬೇಕಿದೆ ಎಂದು ಕಾರ್ಯಕರ್ತರಿಗೆ ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನಿಮ್ಮೆಲ್ಲರ ಪರಿಶ್ರಮದಿಂದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಅದೇ ರೀತಿ ಚುನಾವಣೆಯ ಸಮಯದಲ್ಲಿ ಪಕ್ಷ ಮತದಾರರಿಗೆ ನೀಡಿದ ಭರವಸೆಯಂತೆ ಪಂಚ ಗ್ಯಾರೆಂಟಿಗಳನ್ನು ಈಡೇರಿಸಿದೆ. ಇದು ನಮ್ಮ ಸರ್ಕಾರ ಇರುವವರೆಗೂ ಸಹಾ ಮುಂದುವರೆಯಲಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ ವಿಧಾನಸಭೆಯ ಚುನಾವಣೆಯಲ್ಲಿ ಆರು ಸ್ಥಾನದಲ್ಲಿ 5 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಮುಂದಿನ ಚುನಾವಣೆಯಲ್ಲಿ ಆರಕ್ಕೆ ಆರು ಸ್ಥಾನವನ್ನು ಸಹಾ ಗೆಲ್ಲಬೇಕಿದೆ. ಇದರ ಬಗ್ಗೆ ಈಗಿನಿಂದಲೇ ಪಕ್ಷದ ಮುಖಂಡರು ಕಾರ್ಯಕರ್ತರು ಸಜ್ಜಾಗಬೇಕಿದೆ ಎಂದರು. ಮಾಜಿ ಸಚಿವರಾದ ಅಂಜನೇಯರವರು ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಂಡಿದ್ದಾರೆ ಎಂದರು.
ಚಿತ್ರದುರ್ಗ ಜಿಲ್ಲೆಯಲ್ಲಿ ಮತ್ತೋಮ್ಮೆ ಸಭೆ ಕರೆದು ಅಲ್ಲಿಗೆ ನಾನು ಹಾಗೂ ನನ್ನ ಅಧಿಕಾರಿಗಳು ಬಂದು ನಿಮ್ಮ ಸಮಸ್ಯೆ ಏನೇ ಇದ್ದರೂ ಸಹಾ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.ಸಭೆಯಲ್ಲಿ ಸರ್ಕಾರದ ಸಾಧನೆ ಹಾಗೂ ಕೇಂದ್ರ ಸರ್ಕಾರದ ವೈಫಲ್ಯಗಳನ್ನು ತಿಳಿಸಲಾಗುವುದು. ಬೇರೆ ರಾಜ್ಯಗಳಿಗೆ ನಮ್ಮ ರಾಜ್ಯದಲ್ಲಿ ಸಿಗುವಂತ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುವುದು. ಕಾಂಗ್ರೆಸ್‍ಗೆ ತನ್ನದೆ ಆದ ಇತಿಹಾಸ ಇದೆ.
ರಾಜ್ಯದಲ್ಲಿ ಬಿಜೆಪಿಯವರು ಬಹಳ ಸುಳ್ಳುನ್ನು ಹೇಳುತ್ತಿದ್ದಾರೆ. ಅದಕ್ಕಾಗಿ ನಾನಾ ರೀತಿಯ ಮಾರ್ಗವನ್ನು ಅವಲಂಬಿಸುತ್ತಿದ್ದಾರೆ. ಜನತೆಯೂ ಸಹಾ ಅದನ್ನೇ ನಂಬುತ್ತಿದ್ದಾರೆ. ಈ ಹಿನ್ನಲೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಸತ್ಯವನ್ನು ತಿಳಿದು ಅದನ್ನು ಜನರಿಗೆ ತಿಳಿಸುವಂತ ಕಾರ್ಯ ಮಾಡಬೇಕು ಎಂದರು.
ಮಾಜಿ ಸಚಿವ ಹೆಚ್.ಅಂಜನೇಯ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ರವರ ಜೋಡಿ ನಾಯಕತ್ವದಲ್ಲಿ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಸರ್ಕಾರವನ್ನು ರಚನೆ ಮಾಡಲಾಗಿದೆ. ಗ್ಯಾರೆಂಟಿಯನ್ನು ಸಹಾ ಜಾರಿ ಮಾಡಿದೆ. ಜನರ ಸರ್ವತೋಮುಖ ಯೋಜನೆಯನ್ನು ಸರ್ಕಾರ ಜಾರಿ ಮಾಡಿದೆ. ಇದರಿಂದ ಬಡತನ ನಿರ್ಮೂಲನೆಯಾಗಿದೆ.
ಕಾಂಗ್ರೆಸ್ ಪಕ್ಷ ಜಾರಿಗೆ ತಂದ ಪಂಚ ಗ್ಯಾರೆಂಟಿಗಳಿಂದ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ ಉಚಿತವಾದ ಪ್ರಯಾಣ, ವಿದ್ಯುತ್, ಗೃಹ ಲಕ್ಷ್ಮೀ, ನಿರುದ್ಯೋಗ ಭತ್ಯೆ, ಅಕ್ಕಿಯನ್ನು ವಿತರಣೆ ಮಾಡಲಾಗುತ್ತದೆ. ಈ ಪಂಚ ಗ್ಯಾರೆಂಟಿಯಿಂದ ಬಿಜೆಪಿಯವರು ಅಭಿವೃದ್ಧಿಯಾಗಿಲ್ಲ ಎಂದು ಬೊಬ್ಬೆ ಹೊಡಿಯುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ರವರು ಅರ್ಥಿಕ ತಜ್ಞರಾಗಿ ಗ್ಯಾರೆಂಟಿಯ ಜೊತೆಗೆ ಅಭಿವೃದ್ಧಿಯನ್ನು ಸಹಾ ಮಾಡಿದ್ದಾರೆ ಎಂದರು.
ಡಿಸಿಸಿ ಅಧ್ಯಕ್ಷ ತಾಜ್‍ಪೀರ್, ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್, ಮೈಲಾರಪ್ಪ, ಗ್ಯಾರೆಂಟಿ ಜಿಲ್ಲಾಧ್ಯಕ್ಷ ಶಿವಣ್ಣ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಜಯಮ್ಮ, ಬ್ಲಾಕ್ ಅಧ್ಯಕ್ಷ ಲಕ್ಷ್ಮೀಕಾಂತ್, ಜೆಜೆಹಟ್ಟಿ ತಿಪ್ಪೇಸ್ವಾಮಿ, ಓ.ಶಂಕರ್, ಅಂಜನಪ್ಪ ಜಾಕಿರ್ ಹುಸೇನ್, ಖಾಸಿಂಆಲಿ, ಯೋಗೀಶ್ ಬಾಬು, ಪ್ರಕಾಶ್ ಶಿವಲಿಂಗಪ್ಪ, ಮಂಜುನಾಥ್ ಸೇರಿದಂತೆ ಇತರರು ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
